ಅಪನಗದೀಕರಣ ತಪ್ಪಲ್ಲ ಎಂದು ತೀರ್ಪು ನೀಡಿದ ಸುಪ್ರೀಂಕೋರ್ಟ್, ಕೇಂದ್ರ ಸರ್ಕಾರದ ನೋಟು ಬ್ಯಾನ್‌ನಿರ್ಧಾರವನ್ನು ಎತ್ತಿ ಹಿಡಿದಿದೆ. 2016ರಲ್ಲಿ ಕೇಂದ್ರ ಸರ್ಕಾರ 500 ರು. ಮತ್ತು 1000 ರು. ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿ ಘೋಷಿಸಿದ ಕ್ರಮ ಪ್ರಶ್ನಿಸಿ ನೋಟ್ ಬ್ಯಾನ್ ವಿರೋಧಿಸಿ ಸಲ್ಲಿಕೆಯಾದ 58 ಅರ್ಜಿಗಳನ್ನು ಸುಪ್ರೀಂಕೋರ್ಟ್‌ವಜಾಗೊಳಿಸಿದೆ. ಇಂದೊಂದು ಆರ್ಥಿಕ ನೀತಿಯಾಗಿರುವುದರಿಂದ ಈ ನಿರ್ಧಾರವನ್ನು ಹಿಂಪಡೆಯಲು ಸಾಧ್ಯವಿಲ್ಲ. ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಯು ದೋಷಪೂರಿತವಾಗಿಲ್ಲ. ಆರ್‌ಬಿಐ ಒಪ್ಪಿಗೆ ಪಡೆದೇ ಕೇಂದ್ರ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ. ಕೇಂದ್ರದ ನಿರ್ಧಾರದಲ್ಲಿ ಮಧ್ಯ ಪ್ರವೇಶಿಸುವುದಿಲ್ಲ. ಅಲ್ಲದೇ ನೋಟು ಅಮಾನ್ಯೀಕರಣ ನಿರ್ಧಾರ ಯಾವುದೇ ಕಾನೂನು ಅಥವಾ ಸಾಂವಿಧಾನಿಕ ದೋಷಗಳಿಂದ ಕೂಡಿಲ್ಲ ಎಂದು ಹೇಳಿದ ಸುಪ್ರೀಂಕೋರ್ಟ್ ಕೇಂದ್ರ ಸರ್ಕಾರದ ಈ ನಿರ್ಧಾರವನ್ನು ಎತ್ತಿ ಹಿಡಿದಿದೆ.