ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು 100ಕ್ಕೂ ಹೆಚ್ಚು ಪ್ರಕರಣಗಳನ್ನು ಎದುರಿಸುತ್ತಿದ್ದು, ಈ ಹಿನ್ನೆಲೆ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗುವ ವೇಳೆಯೂ ತಮ್ಮನ್ನು ಯಾರಾದರೂ ಕೊಲ್ಲಬಹುದು ಎಫ್‌ಜೆಸಿ ಹೊರಗಡೆ ತನ್ನನ್ನು ಕೊಲ್ಲಲು ಸುಮಾರು 20 ಜನ ಅಪರಿಚಿತ ವ್ಯಕ್ತಿಗಳು ಕಾದು ಕುಳಿತಿದ್ದರು ಎಂದು ಹೇಳಿಕೊಂಡಿದ್ದಾರೆ. ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಯನ್ನು ನಡೆಸಲು ಅವಕಾಶ ನೀಡುವಂತೆ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿ ಉಮರ್ ಅಟ್ಟಾ ಬಂಡಿಯಲ್ ಅವರಿಗೆ ಪತ್ರ ಬರೆದು ನ್ಯಾಯಮೂರ್ತಿಗಳಿಗೆ ಮನವಿ ಮಾಡಿದ್ದಾರೆ.