ಪಕ್ಷದ ಸಂಘಟನೆಗೆ ನಾವು ನಮ್ಮ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು ಬಿಜೆಪಿಯವರು ಸರ್ಕಾರ ಇದೆ ಎಂದು ಚುನಾವಣಾ ಬಾಂಡ್ ಹೆಸರಲ್ಲಿ ಹಣ ಸಂಗ್ರಹಿಸಿದ್ದಾರೆ. ಆದರೆ ನಮಗೆ ಬಾಂಡ್ ಕೊಡುವವರಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಬಿಜೆಪಿಯವರು ಏನಾದರೂ ಟೀಕೆ ಮಾಡಲಿ. ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಅರ್ಜಿ ಶುಲ್ಕ 5 ಸಾವಿರ ಹಾಗೂ ಅರ್ಜಿ ಸಲ್ಲಿಸುವಾಗ 2 ಲಕ್ಷ, 1 ಲಕ್ಷ ರೂ. ಡಿಡಿ ಪಡೆದರೆ ಬಿಜೆಪಿಯವರಿಗೇನು ನೋವು ಎಂದರು.