ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸಿ.ವಿ ಆನಂದ ಬೋಸ್‌ಅವರು ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಕೋಲ್ಕತಾ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶ ಪ್ರಕಾಶ್‌ಶ್ರಿವಾಸ್ತವ ಅವರು ಆನಂದ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೇರಿ ರಾಜ್ಯದ ಹಲವು ಮಂತ್ರಿಗಳು ಹಾಗೂ ಸಭಾಪತಿ ಬೀಮನ್‌ಬ್ಯಾನರ್ಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.