ಪಾಕಿಸ್ತಾನದ ಸಿಂದ್ ಪ್ರಾಂತ್ಯದ ಹಿಂದೂ ಹುಡುಗಿಯೊಬ್ಬಳನ್ನು ಅಪಹರಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿ ಹುಡುಗಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ. ಚಂದ್ರ ಮೆಹರಾಜ್ ಎಂಬಾಕೆ ಹೈದರಾಬಾದ್‍ನ ಫತೇ ಚೌಕ್‍ನಿಂದ ಮನೆಗೆ ಮರಳುತ್ತಿದ್ದಾಗ ಅವಳನ್ನು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೇವಲ 2 ವಾರದಲ್ಲಿ ಬೆಳಕಿಗೆ ಬಂದ 4ನೇ ಪ್ರಕರಣ ಇದಾಗಿದೆ. ಅಲ್ಪಸಂಖ್ಯಾತ ಹಿಂದೂ ಸಮುದಾಯದ ಮೂವರು ಮಹಿಳೆಯರನ್ನು ಅಪಹರಿಸಿ ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿದ ಘಟನೆಗಳು ಪಾಕಿಸ್ತಾನದಲ್ಲಿ ಇತ್ತೀಚೆಗೆ ಹೆಚ್ಚು ಬೆಳಕಿಗೆ ಬರುತ್ತಿವೆ.