ಇಂದು ಇಸ್ಲಾಮಾಬಾದ್‌ಹೈಕೋರ್ಟ್‌ಆವರಣದಲ್ಲೇ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್‌ಖಾನ್‌ಅವರನ್ನು ಪ್ಯಾರಾ ಮಿಲಿಟರಿ ಪಡೆ ಬಂಧಿಸಿದೆ. ಕೋರ್ಟ್‌ಆವರಣದಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದ್ದು ಸೆಕ್ಷನ್144 ಜಾರಿಗೊಳಿಸಲಾಗಿದೆ. ಇಮ್ರಾನ್‌ಖಾನ್‌ಮೇಲೆ 143 ಎಫ್‌ಐಆರ್‌ದಾಖಲಾಗಿದ್ದು ಈಗ ಖಾದಿರ್ ಟ್ರಸ್ಟ್ ಪ್ರಕರಣದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಮ್ರಾನ್‌ಖಾನ್‌ಮತ್ತು ಅವರ ಪತ್ನಿ ಒಡೆತನದ ಅಲ್-ಖಾದಿರ್ ಟ್ರಸ್ಟ್‌ಗೆ ಬಹ್ರಿಯಾ ಟೌನ್ 530 ದಶಲಕ್ಷ ಪಾಕಿಸ್ತಾನ ರೂ. ಮೌಲ್ಯದ ಭೂಮಿಯನ್ನು ಮಂಜೂರು ಮಾಡಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ. ಈ ವೇಳೆ ಪಿಟಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು. ಉಡುಗೊರೆಯಾಗಿ ಪಡೆದ ಕೋಟ್ಯಂತರ ರೂ. ಮೌಲ್ಯದ ದುಬಾರಿ ನೆಕ್ಲೆಸ್‌ಉಡುಗೊರೆಯಾಗಿ ಬಂದಿತ್ತು. ಆದರೆ ಅವರು ಅದನ್ನು ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡದೇ ವ್ಯಾಪಾರಿಯೊಬ್ಬರಿಗೆ 18 ಕೋಟಿ ಪಾಕಿಸ್ತಾನ ರೂ.ಗೆ ಮಾರಾಟ ಮಾಡಿದ್ದಾರೆ ಮಾರಾಟ ಮಾಡಿರುವ ಸಂಬಂಧ ಕಾನೂನುಬಾಹಿರ ಕೃತ್ಯ ಎಂದು ಪರಿಗಣಿಸಲಾಗುತ್ತದೆ. ಫೆಡರಲ್ ಇನ್ವೆಸ್ಟಿಗೇಷನ್ ಏಜೆನ್ಸಿ ತನಿಖೆ ನಡೆಸಿತ್ತು ಆರೋಪವನ್ನು ಇಮ್ರಾನ್‌ಎದುರಿಸುತ್ತಿದ್ದಾರೆ. ಖಾನ್‌ರಾಜೀನಾಮೆ ಬೆನ್ನಲ್ಲೇ ಅವರ ವಿರುದ್ಧ ಹಲವು ಆರೋಪಗಳು ವ್ಯಕ್ತವಾಗುತ್ತಿದ್ದು, ತನಿಖೆ ನಡೆಯುತ್ತಿದೆ. ಮಾರ್ಚ್‌ತಿಂಗಳಿನಲ್ಲಿ ಇಮ್ರಾನ್‌ಖಾನ್‌ಅವರನ್ನು ಬಂಧಿಸಲು ಪೊಲೀಸರು ಲಾಹೋರ್‌ನಿವಾಸಕ್ಕೆ ಆಗಮಿಸಿದ್ದರು. ಈ ವೇಳೆ ಪಿಟಿಐ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದರು.