ಭಾರೀ ಸ್ಫೋಟ ಸಂಭವಿಸಿದ ಘಟನೆಯಲ್ಲಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ಪುಟಿನ್ಕನಸಿನ ಯುರೋಪಿನ ಉದ್ದದ ಕ್ರಿಮಿಯಾ ಸೇತುವೆಗೆ ಮತ್ತೆ ಹಾನಿಯಾಗಿದೆ. ಇದರಿಂದ ಕ್ರಿಮಿಯಾ-ರಷ್ಯಾ ಸಂಪರ್ಕ ಕಡಿತಗೊಂಡಿದೆ. ಸೇತುವೆ ಮೇಲೆ ಸ್ಫೋಟಗಳು ಸಂಭವಿಸಿದ್ದು, ರಷ್ಯಾದ ಬೆಲ್ಗೊರೊಡ್ ಪ್ರದೇಶದ ದಂಪತಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಹೆಣ್ಣುಮಗುವೊಂದು ಗಾಯಗೊಂಡಿರುವುದಾಗಿ ವರದಿಯಾಗಿದೆ. ರಷ್ಯಾದ ಯೋಧರಿಗೆ ಸಾಮಗ್ರಿಗಳನ್ನ ತಲುಪಿಸುವ ಪ್ರಮುಖ ಮಾರ್ಗವಾಗಿರುವ ಕ್ರಿಮಿಯಾ ಸೇತುವೆ ಮೇಲೆ ಕಳೆದ ವರ್ಷ ಅಕ್ಟೋಬರ್ತಿಂಗಳಲ್ಲಿ ದಾಳಿ ನಡೆದಿತ್ತು. ಸೇತುವೆ ಮಧ್ಯಭಾಗ ಸಂಪೂರ್ಣ ಧ್ವಂಸಗೊಂಡಿತ್ತು. ಇದಕ್ಕೆ ಉಕ್ರೇನ್ಸೇನೆ ಕಾರಣ ಇದರ ಹಿಂದೆ ಉಕ್ರೇನ್ಕೈವಾಡವಿದೆ ಎಂದು ರಷ್ಯಾ ರಕ್ಷಣಾ ವಲಯದ ಅಧಿಕಾರಿಗಳು ಆರೋಪಿಸಿದ್ದರು.