ಬೆಳಗಾವಿಯ ಪಂತ ಬಾಳೇಕುಂದ್ರಿ ಗ್ರಾಮದಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಯ ಸಮಾವೇಶ ಮುಗಿಸಿ ಬಸ್ಸಿನಲ್ಲಿ ಸಿದ್ದರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್, ಎಂಎಲ್ಸಿ ಚೆನ್ನರಾಜ ಹಟ್ಟಿಹೊಳಿ ಸೇರಿದಂತೆ ಇತರ ನಾಯಕರು ವಾಪಸ್ ಬರುತ್ತಿದ್ದರು. ನೀವಿಬ್ಬರು ಸಮಾವೇಶಕ್ಕೆ ಬರಬೇಕು ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಆಹ್ವಾನ ನೀಡಿದರು. ಚುನಾವಣೆ ಇರೋದ್ರಿಂದ ಅವರು ಜನರನ್ನು ಸೇರಿಸುತ್ತಾರೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು. ಈ ವೇಳೆ ಪ್ರತಿಯೊಬ್ಬರನ್ನು 500 ರೂಪಾಯಿ ಕೊಟ್ಟು ಕರೆದುಕೊಂಡು ಬರಬೇಕು ಎಂದು ಸಿದ್ದರಾಮಯ್ಯ ಹೇಳಿದ 20 ಸೆಕೆಂಡ್ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.ಜನರನ್ನು ಸೇರಿಸಲು 500 ರೂ. ಕೊಡಬೇಕು ಎಂದಿರುವ ಸಿದ್ದರಾಮಯ್ಯ, ವಿಪಕ್ಷಗಳನ್ನು ಉದ್ದೇಶಿಸಿ ಮಾತನಾಡಿದ್ದಾರಾ? ಅಥವಾ ತಾವು ನಡೆಸುವ ಸಮಾವೇಶ ಬಗ್ಗೆ ಮಾತನಾಡಿದ್ದಾರಾ ಎಂಬ ಬಗ್ಗೆ ಅಸ್ಪಷ್ಟವಾಗಿದೆ. ಸದ್ಯ ಈ ವೀಡಿಯೋವನ್ನು ಬಿಜೆಪಿ ಕರ್ನಾಟಕ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡು ಕಿಡಿಕಾರಿದೆ.