ಪ್ರತಿ ತಿಂಗಳ ಸರಾಸರಿ ಮೀರಿದರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಕಾಂಗ್ರೆಸ್ ಸರ್ಕಾರದ ಗೃಹಜ್ಯೋತಿ ಗ್ಯಾರಂಟಿಗೆ ಜನತೆಯಲ್ಲಿ ಹಲವು ಗೊಂದಲಗಳು ಉಳಿದುಕೊಂಡಿವೆ. ಈ ಎಲ್ಲಾ ಗೊಂದಲಗಳಿಗೆ ತೆರೆಎಳೆಯಲು ಇಂಧನ ಸಚಿವ ಕೆಜೆ ಜಾರ್ಜ್ ಸುದ್ದಿಗೋಷ್ಠಿ ನಡೆಸಿ.ಮಾತನಾಡಿದ ಕೆಜೆ ಜಾರ್ಜ್, ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ ವಿದ್ಯುತ್ ಉಚಿತ ಕೊಡುತ್ತಿದ್ದೇವೆ ಎಂದು ತಿಳಿಸಿದರು.ಗೃಹಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಲು ಜನರು ಆಧಾರ್ ಕಾರ್ಡ್ ಅನ್ನು ಆರ್‌ಆರ್ ನಂಬರ್‌ಗೆ ಲಿಂಕ್ ಮಾಡಬೇಕು. ವಾಸದ ಕರಾರು ಪತ್ರ ಅಥವಾ ವೋಟರ್ ಐಡಿ ನೀಡಬೇಕು. ಬಾಡಿಗೆ ಮನೆಯವರಿಗೂ, ಸ್ವಂತ ಮನೆಯವರಿಗೂ ಇದು ಅನ್ವಯಿಸುತ್ತದೆ. ಬೆಂಗಳೂರು ಒನ್ ಸೇವಾಕೇಂದ್ರದಲ್ಲಿ ಈ ವ್ಯವಸ್ಥೆಯನ್ನು ಪಡೆಯಬಹುದು.ಜೂನ್ 15 ರಿಂದ ನೋಂದಣಿ ಆರಂಭವಾಗಿ, ಜುಲೈ 5 ರವರೆಗೆ ಅವಕಾಶ ಇರುತ್ತದೆ.ಆಗಸ್ಟ್ 1 ರಿಂದ ಯೋಜನೆ ಜಾರಿಗೆ ಬರಲಿದೆ. 2 ಕೋಟಿ 16 ಲಕ್ಷ ಗೃಹಬಳಕೆ ಗ್ರಾಹಕರು ಇದ್ದಾರೆ. ಅದರಲ್ಲಿ 2 ಕೋಟಿ 14 ಲಕ್ಷ ಗ್ರಾಹಕರು 200 ಯೂನಿಟ್ ಒಳಗೆ ಬಳಕೆ ಮಾಡುವವರು ಇದ್ದಾರೆ. 2 ಲಕ್ಷ ಮಾತ್ರ 200 ಯೂನಿಟ್‌ಗೂ ಹೆಚ್ಚು ವಿದ್ಯುತ್ ಬಳಕೆ ಮಾಡುವವರು ಇದ್ದಾರೆ. ಅದರಲ್ಲಿ 53 ಯೂನಿಟ್ ಅತಿ ಹೆಚ್ಚು ಬಳಕೆ ಮಾಡುವವರು ಇದ್ದಾರೆ. ಗೃಹಜ್ಯೋತಿ ಯೋಜನೆ ಹೊರರಾಜ್ಯದವರಿಗೂ ಸಿಗಲಿದೆ. ಆಸ್ತಿ ತೆರಿಗೆ ಕಡ್ಡಾಯ ಇಲ್ಲ. ಹೊಸ ಬಾಡಿಗೆದಾರರು ಅಥವಾ 12 ತಿಂಗಳಿಗಿoತ ಕಡಿಮೆ ವಾಸವಾಗಿರುವವರ ಬಗ್ಗೆ ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಲಾಗುತ್ತದೆ. ಇದರ ಬಗ್ಗೆ ಇನ್ನೆರಡು ದಿನಗಳಲ್ಲಿ ಘೋಷಣೆ ಮಾಡುತ್ತೇವೆ.200 ಯೂನಿಟ್ ಒಳಗೆ ಇದ್ದರೂ ಹೆಚ್ಚುವರಿ ಟ್ಯಾಕ್ಸ್ ಅನ್ವಯ ಆಗುತ್ತದೆ. ಆದರೆ ಫಿಕ್ಸ್ಡ್ ಚಾರ್ಜ್ ಇರಲ್ಲ. ಸರಾಸರಿ ಬಳಕೆಯ 10% ಹೆಚ್ಚುವರಿ ಆದ ಬಳಿಕದ ಹೆಚ್ಚುವರಿ ಯೂನಿಟ್‌ಗೆ 9% ಟ್ಯಾಕ್ಸ್ ಬೀಳುತ್ತದೆ. ಪ್ರತಿ ತಿಂಗಳ ಸರಾಸರಿ ಮೀರಿದರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು. 200 ಯೂನಿಟ್ ಮೇಲ್ಪಟ್ಟ ಬಳಕೆದಾರರು ಮುಂದಿನ ವರ್ಷ ಏನಾದರೂ ಕಡಿಮೆ ಬಳಕೆ ಮಾಡಿದರೆ ಅದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚಿಸಲಾಗುವುದು ಎಂದು ಸ್ಪಷ್ಟಪಡಿಸಿದರು.

Leave a Reply

Your email address will not be published. Required fields are marked *