ಪ್ರತಿ ಪಕ್ಷದ ನಾಯಕರ ಅಲಭ್ಯತೆ ಹಿನ್ನಲೆ ಬುಧವಾರ ನಡೆಯಬೇಕಿದ್ದ INDIA ಒಕ್ಕೂಟದ ಸಭೆ ಮುಂದೂಡಿಕೆ

ಪಂಚರಾಜ್ಯಗಳ ಚುನಾವಣೆ ಹಿನ್ನಲೆ ಒಕ್ಕೂಟದ ಸಭೆ ನಡೆಸಲು ಸಾಧ್ಯವಾಗಿರಲಿಲ್ಲ. ಫಲಿತಾಂಶ ಪ್ರಕಟವಾದ ಬಳಿಕ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿಯಲ್ಲಿ ಸಭೆ ನಡೆಸಲು ನಿರ್ಧರಿಸಿದ್ದರು‌.ಮಿಚಾಂಗ್‌ಚಂಡಮಾರುತದಿಂದ ಚೆನ್ನೈ ವಿಮಾನ ನಿಲ್ದಾಣವನ್ನು ಮುಚ್ಚಿದ್ದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರು ದೆಹಲಿಗೆ ಭೇಟಿ ನೀಡಲು ಮತ್ತು ಸಭೆಗೆ ಬರಲು ಸಾಧ್ಯವಾಗುವುದಿಲ್ಲ ಎಂದು ತಿಳಿಸಿದ್ದಾರೆ. ನಿತೀಶ್ ಕುಮಾರ್ ಅವರು ಅಸ್ವಸ್ಥರಾಗಿದ್ದು, ಪಶ್ಚಿಮ‌ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಅಖಿಲೇಶ್ ಯಾದವ್ ಸಭೆಗೆ ಗೈರಾಗುವ ಬಗ್ಗೆ‌‌ಮೊದಲೇ ಮಾಹಿತಿ‌ನೀಡಿದ್ದರು. ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೂಡಾ ಸಭೆಯಲ್ಲಿ ಭಾಗಿಯಾಗಿರುವ ಖಚಿತ ಪಡಿಸಿದ್ದರು. ಆಮ್ ಆದ್ಮಿ ಪಕ್ಷವು ಸಭೆಯಲ್ಲಿ ಭಾಗಿಯಾಗುವ ಬಗ್ಗೆ ಯಾವುದೇ ದೃಢೀಕರಣ ನೀಡಿರಲಿಲ್ಲ.ಪ್ರಮುಖ ನಾಯಕರ ಅಲಭ್ಯತೆ ಹಿನ್ನಲೆ ಸಭೆಯನ್ನು ಮುಂದೂಡಲು ನಿರ್ಧರಿಸಿದ್ದು ಮುಂದಿನ ಎರಡು ವಾರಗಳಲ್ಲಿ ಮತ್ತೆ ಸಭೆಗೆ ದಿನಾಂಕ‌ನಿಗದಿ ಮಾಡಲು ಕಾಂಗ್ರೆಸ್‌ನಿರ್ಧರಿಸಿದೆ. ಸಭೆ ರದ್ದಾದ ಹಿನ್ನಲೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ತಮ್ಮ ವಿಮಾನ ಟಿಕೆಟ್‌ಗಳನ್ನು ರದ್ದುಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *