ಪ್ರತಿ ಲೀಟರ್‌ಗೆ ಹಾಲಿನ ದರ 3 ರೂಪಾಯಿ ಹೆಚ್ಚಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹಾಲು ಮಹಾಮಂಡಳಿ (ಕೆಎಂಎಫ್) ಪ್ರಸ್ತಾವ ಸಲ್ಲಿಸಿದೆ. ಬೇರೆ ರಾಜ್ಯಗಳಲ್ಲಿ ಹೆಚ್ಷಿನ ಬೆಲೆಗೆ ಹಾಲು ಮಾರಾಟಮಾಡುತ್ತಾರೆ. ಆದರೆ ನಮ್ಮ ರಾಜ್ಯದಲ್ಲಿ ಕೆಎಂಎಫ್‌ನಿಂದ ಕಡಿಮೆ ಬೆಲೆಗೆ ಹಾಲು ಮಾರಾಟ ಮಾಡಲಾಗುತ್ತಿದೆ. ಸರ್ಕಾರ ದರ ಏರಿಕೆ ಮಾಡದಿದ್ದರೆ ಪ್ರತಿಭಟನೆ ಮಾಡಲು ಹಾಲು ಒಕ್ಕೂಟದವರು ಚಿಂತನೆ ನಡೆಸಿದ್ದಾರೆ. ಬೆಲೆ ಏರಿಕೆ ಮಧ್ಯೆ ಹಾಲು ಉತ್ಪಾದನೆ, ಹೈನುಗಾರಿಕೆ ಕಷ್ಟ ಆಗುತ್ತಿದೆ. ಉಳಿತಾಯ ಮಾಡುವುದಕ್ಕೆ ಸಾಧ್ಯ ಆಗುತ್ತಿಲ್ಲ.