ವಿಶ್ವಯೋಗ ದಿನ ಹಿನ್ನೆಲೆ ಮೈಸೂರಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಯಲಹಂಕ ವಿಮಾನಕ್ಕೆ ಬಂದಿಳಿದ ಮೋದಿ ಅವರನ್ನು ಥಾವರ್ ಚಂದ್ ಗೆಹ್ಲೋಟ್, ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬರಮಾಡಿಕೊಂಡರು. ಈ ವೇಳೆ ಎಲ್ಲರನ್ನು ಬಿಟ್ಟು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಯಡಿಯೂರಪ್ಪ ಕೈ ಹಿಡಿದು ಆರೋಗ್ಯವನ್ನು ವಿಚಾರಿಸುತ್ತಾ, ಬಹಳ ಆತ್ಮೀಯವಾಗಿ ಮಾತನಾಡಿಸಿದ್ದಾರೆ. ಈ ಮುನ್ನ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಂದರ್ಭದಲ್ಲಿ ದೆಹಲಿಗೆ ತೆರಳಿ ಯಡಿಯೂರಪ್ಪ ಅವರು ಪ್ರಧಾನಿಯನ್ನು ಭೇಟಿ ಮಾಡಿದ್ದರು. ಇದೀಗ 11 ತಿಂಗಳ ನಂತರ ಮೋದಿ ಅವರೊಂದಿಗೆ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.