ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಲೋಕಮಾನ್ಯ ತಿಲಕ್‌ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಸ್ವಾತಂತ್ರ್ಯ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ತಿಲಕ್ ಅವರ ಹೆಸರಿನ ಪ್ರಶಸ್ತಿಯನ್ನು ಸ್ವೀಕರಿಸಿರುವುದು ನನಗೆ ಗೌರವ ತಂದಿದೆ. ಪ್ರಶಸ್ತಿ ಮೊತ್ತದ 1 ಲಕ್ಷ ರೂ.ಗಳನ್ನು ನಮಾಮಿ ಗಂಗೆ ಯೋಜನೆಗೆ ನೀಡಲು ನಿರ್ಣಯಿಸಿದ್ದೇನೆ ಎಂದು ಘೋಷಿಸಿದ್ದಾರೆ. ಪ್ರಶಸ್ತಿ ಸ್ವೀಕರಿಸಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪ್ರಶಸ್ತಿ ನೀಡಿದ್ದಕ್ಕೆ ಹೃತ್ಪೂರ್ವಕ ಧನ್ಯವಾದಗಳು. ಈ ದಿನ ನನಗೆ ಬಹಳ ಮುಖ್ಯವಾದ ಹಾಗೂ ನೆನಪಿನಲ್ಲಿರುವ ದಿನ. ಸ್ವಾತಂತ್ರ್ಯ ಹೋರಾಟದಲ್ಲಿ ತಿಲಕ್‌ರ ಪಾತ್ರವನ್ನು ಪದಗಳಲ್ಲಿ ಅಥವಾ ಕೆಲವು ಘಟನೆಗಳ ಮೂಲಕ ಹೇಳಲು ಸಾಧ್ಯವಿಲ್ಲ. ಈ ಪ್ರಶಸ್ತಿಯನ್ನ ದೇಶದ 140 ಕೋಟಿ ಜನರಿಗೆ ಅರ್ಪಿಸುತ್ತೇನೆ ಎಂದು ಹೇಳಿದ್ದಾರೆ.ಪಿಎಂ ಮೋದಿ ಅವರ ಸನ್ಮಾನ ಸಮಾರಂಭದಲ್ಲಿ ಎನ್‌ಸಿಪಿ ನಾಯಕ ಶರದ್ ಪವಾರ್ ಹಾಜರಿದ್ದರು. ತನ್ನ ಚಿಕ್ಕಪ್ಪನ ವಿರುದ್ಧವೇ ಬಂಡಾಯವೆದ್ದ ಮತ್ತು ರಾಜ್ಯದಲ್ಲಿ ಎನ್‌ಡಿಎ ಸರ್ಕಾರಕ್ಕೆ ಸೇರಲು ಎನ್‌ಸಿಪಿ ಹಲವು ಶಾಸಕರೊಂದಿಗೆ ವಿಭಜನೆಯಾಗಿದ್ದ ಅಜಿತ್‌ಪವಾರ್‌ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.