ಪ್ರಧಾನಿ ಮೋದಿ ಅವರು ರಷ್ಯಾವು ಉಕ್ರೇನ್ ಮೇಲೆ ನಡೆಸುತ್ತಿರುವ ಯುದ್ಧವನ್ನು ಕೊನೆಗೊಳಿಸುವಂತೆ ಕರೆ ನೀಡಿದ್ದರು. ಈ ಬಗ್ಗೆ ಮಾತನಾಡಿರುವ ಅಮೆರಿಕದ ವಿದೇಶಾಂಗ ಇಲಾಖೆಯ ಪ್ರಧಾನ ಉಪ ವಕ್ತಾರ ವೇದಾಂತ್ ಪಟೇಲ್, ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆಯನ್ನು ಸ್ವಾಗತಿಸುತ್ತೇವೆ. ಇತರ ದೇಶಗಳು ರಷ್ಯಾದ ಬಗ್ಗೆ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಳ್ಳುತ್ತಿವೆ. ಯುದ್ಧದ ಪರಿಣಾಮಗಳನ್ನು ತಗ್ಗಿಸಲು ಮಿತ್ರರಾಷ್ಟ್ರಗಳೊಂದಿಗೆ ಸಮನ್ವಯವನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.