ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರಕ್ಕೆ ರಷ್ಯಾ ಆಕ್ರೋಶ ವ್ಯಕ್ತಪಡಿಸಿದೆ. ರಷ್ಯಾದ ವಿದೇಶಾಂಗ ಸಚಿವಾಲಯದ ವಕ್ತಾರೆ ಮಾರಿಯಾ ಜಖರೋವಾ ಪ್ರತಿಕ್ರಿಯಿಸಿ, ಬಿಬಿಸಿ ರಷ್ಯಾದ ವಿರುದ್ಧ ಮಾತ್ರವಲ್ಲದೇ ಸ್ವತಂತ್ರ ನೀತಿಯನ್ನು ಅನುಸರಿಸುತ್ತಿರುವ ಇತರ ದೇಶಗಳ ವಿರುದ್ಧ ಮಾಹಿತಿ ಯುದ್ಧವನ್ನು ನಡೆಸುತ್ತಿದೆ. ಬಿಬಿಸಿ ವಿವಿಧ ರಂಗಗಳಲ್ಲಿ ಮಾಹಿತಿ ಯುದ್ಧವನ್ನು ನಡೆಸುತ್ತಿದೆ ಎಂಬುದಕ್ಕೆ ಇದು ಮತ್ತೊಂದು ನಿದರ್ಶನ. ಬಿಬಿಸಿ ಈಗ ಸ್ವತಂತ್ರವಾಗಿ ಉಳಿದಿಲ್ಲ. ಪತ್ರಿಕೋದ್ಯಮ ವೃತ್ತಿಯನ್ನು ನಿರ್ಲಕ್ಷಿಸಿ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.