ಪ್ರಧಾನಿ ಮೋದಿಗೆ ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಹಸ್ತಲಾಘವ : G – 20 Summit

ಭಾರತವು ಉಕ್ರೇನ್ ಯುದ್ಧದಲ್ಲಿ ಅಮೆರಿಕ ಪರವಾಗಿರದಿದ್ದರೂ ಹಾಗೂ ರಷ್ಯಾದಿಂದ ತೈಲ ಖರೀದಿಯ ಸಮಯದಲ್ಲಿ ಬೈಡೆನ್ – ಮೋದಿ ಹಸ್ತಲಾಘವ ಹಾಗೂ ಅಪ್ಪುಗೆಯಾಗಿರುವುದು ಪ್ರಾಮುಖ್ಯತೆ ಪಡೆದುಕೊಂಡಿದೆ.
ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುತ್ತಿರುವ ಜಿ – 20 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಭಾಗಿಯಾಗಿದ್ದು, ಈ ವೇಳೆ ಜೋ ಬೈಡೆನ್ ಅವರೇ ಪ್ರಧಾನಿ ಮೋದಿ ಅವರ ಬಳಿ ಹಸ್ತಲಾಘವ ಮಾಡಿರುವುದು ವಿಶೇಷ. ಇದು, ಭಾರತ – ಅಮೆರಿಕ ನಡುವಿನ ಸಂಬಂಧದ ಗಾಢತನವನ್ನು ಸೂಚಿಸುತ್ತದೆ. ಅಲ್ಲದೆ, ಜಿ – 20 ಶೃಂಗಸಭೆಯಲ್ಲಿ ಅಮೆರಿಕ ಅದ್ಯಕ್ಷರು – ಪ್ರಧಾನಿ ಮೋದಿ ಅಕ್ಕಪಕ್ಕ ಕುಳಿತುಕೊಂಡಿದ್ದಾರೆ. ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರನ್ನು ಸಹ ಈ ವಿಡಿಯೋದಲ್ಲಿ ನೋಡಬಹುದಾಗಿದೆ.

Leave a Reply

Your email address will not be published. Required fields are marked *