ಪ್ರಧಾನಿ ಮೋದಿ 20 ಗಂಟೆಗಳ ಕಾಲ ಇದ್ದದಕ್ಕೆ 34 ಕೋಟೆ ರೂಪಾಯಿಗಳನ್ನ ಖರ್ಚು ಮಾಡಲಾಗಿದೆ

ಮೋದಿ ಅವರು ಕೇವಲ 4 ಗಂಟೆ ಮಾತ್ರ ಬೆಂಗಳೂರಿನಲ್ಲಿದ್ದರು. ಇದಕ್ಕೆ ಬಿಬಿಎಂಪಿ ಬರೋಬ್ಬರಿ 14 ಕೋಟಿ ಖರ್ಚು ಮಾಡಿದೆ ಈ ಬಗ್ಗೆ ಮಾಹಿತಿ ನೀಡಿದ ಬಿಬಿಎಂಪಿ ಆಯುಕ್ತರ ತುಷಾರ್‌ಗಿರಿನಾಥ್‌, ಪ್ರಧಾನಿ ರಾಜ್ಯಕ್ಕೆ ಬರುತ್ತಿರೋದೆ ನಮಗೆಲ್ಲ ಸಂತೋಷದ ವಿಚಾರವಾಗಿದೆ. ಆ ನಿಟ್ಟಿನಲ್ಲಿ ಭರ್ಜರಿ ಸಿದ್ದತೆ ನಡೆಸಲಾಗಿತ್ತು. ಸಿಟಿಯ ಪ್ರತಿ ರಸ್ತೆಗಳನ್ನು ರಿಪೇರಿ ಮಾಡಿ ಪಳ-ಪಳ ಹೊಳೆಯುವಂತೆ ಮಾಡಲಾಗಿದೆ. ಇದರಿಂದ ಕೋಟಿ-ಕೋಟಿ ಖರ್ಚು ಮಾಡಲಾಗಿದೆ. ಇನ್ನೂ ಮೈಸೂರಿನಲ್ಲೂ ರಸ್ತೆಗಳಿಗೆ ಹೊಸ ರೂಪವನ್ನೆ ನೀಡಲಾಗಿತ್ತು. ವಸತಿ, ಯೋಗ ಕಾರ್ಯಕ್ರಮಗಳ ಸಿದ್ಧತೆ ಉಪಹಾರ ಸೇರಿದಂತೆ ಬರೊಬ್ಬರಿ 20 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ ಒಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕದಲ್ಲಿ ಒಟ್ಟು 20 ಗಂಟೆಗಳ ಕಾಲ ಇದ್ದದಕ್ಕೆ 34 ಕೋಟೆ ರೂಪಾಯಿಗಳನ್ನ ಖರ್ಚು ಮಾಡಲಾಗಿದೆ.

Leave a Reply

Your email address will not be published.