ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾನನ್ನು ಬೆಳಗಿನ ಜಾವ ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ, ಡಿಸಿಪಿ ಎದುರು ಹಾಜರುಪಡಿಸುವ ಸಾಧ್ಯತೆಯಿದೆ. ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳ ಶೋಧ ಕಾರ್ಯ ನಡೆಸುತ್ತಿದೆ.