ಫಲಿಸದ ಪಂತ್‌ ಮ್ಯಾಜಿಕ್‌; ಕರ್ರನ್‌ ಅಮೋಘ ಅರ್ಧಶತಕ – ಪಂಜಾಬ್‌ ಕಿಂಗ್ಸ್‌ಗೆ 4 ವಿಕೆಟ್‌ ಜಯ

ಸ್ಯಾಮ್‌ ಕರ್ರನ್‌ ಅಮೋಘ ಅರ್ಧಶತಕದ ಬ್ಯಾಟಿಂಗ್‌ ಹಾಗೂ ಸಂಘಟಿತ ಬೌಲಿಂಗ್‌ ಪ್ರದರ್ಶನದಿಂದ ಪಂಜಾಬ್‌ ಕಿಂಗ್ಸ್‌ ತಂಡವು ಡೆಲ್ಲಿ ಕ್ಯಾಪಿಟಲ್ಸ್‌) ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ. ಪಂಜಾಬ್‌ ಗೆಲುವಿಗೆ ಕೊನೇ ಓವರ್‌ನಲ್ಲಿ 6 ರನ್‌ಗಳ ಅಗತ್ಯವಿತ್ತು. ಆದ್ರೆ ಬೌಲಿಂಗ್‌ನಲ್ಲಿದ್ದ ಸುಮಿತ್ ಕುಮಾರ್ ಆರಂಭದಲ್ಲೇ 2 ವೈಡ್‌ ಎಸೆದರು. ಮೊದಲ ಎಸೆತದಲ್ಲಿ ಯಾವುದೇ ರನ್‌ ಬರಲಿಲ್ಲವಾದರೂ ಕ್ರೀಸ್‌ನಲ್ಲಿದ್ದ ಲಿಯಾಮ್‌ ಲಿವಿಂಗ್‌ಸ್ಟೋನ್‌ 2ನೇ ಎಸೆತದಲ್ಲಿ ಸಿಕ್ಸರ್‌ ಬಾರಿಸಿ ಗೆಲುವು ತಂದುಕೊಟ್ಟರು. ಪಂಜಾಬ್‌ನ ಮುಲ್ಲನ್ಪುರ್‌ನಲ್ಲಿರುವ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಮೊದಲು ಫೀಲ್ಡಿಂಗ್‌ ಆಯ್ದುಕೊಂಡ ಪಂಜಾಬ್‌ ಕಿಂಗ್ಸ್‌ ಬ್ಯಾಟಿಂಗ್‌ ಮಾಡುವ ಅವಕಾಶವನ್ನು ಡೆಲ್ಲಿ ಕ್ಯಾಪಿಟಲ್ಸ್‌ಗೆ ಬಿಟ್ಟುಕೊಟ್ಟಿತು.

ಮೊದಲು ಬ್ಯಾಟಿಂಗ್‌ ಮಾಡಿದ ರಿಷಭ್‌ ಪಂತ್‌ ನಾಯಕತ್ವದ ಡೆಲ್ಲಿ ಕ್ಯಾಪಿಟಲ್ಸ್‌ ತಂಡ 20 ಓವರ್‌ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 174 ರನ್‌ ಗಳಿಸಿತ್ತು. 175 ರನ್‌ ಗಳ ಗುರಿ ಬೆನ್ನತ್ತಿದ್ದ ಪಂಜಾಬ್‌ ಕಿಂಗ್ಸ್‌ (Punjab Kings) 19.2 ಓವರ್‌ಗಳಲ್ಲೇ 6 ವಿಕೆಟ್‌ಗೆ 177 ರನ್‌ ಗಳಿಸಿ ಗೆಲುವು ಸಾಧಿಸಿತು.

 

Leave a Reply

Your email address will not be published. Required fields are marked *