ಫ್ರಾನ್ಸ್ ಮತ್ತು ಭಾರತ ಫ್ರಾನ್ಸ್‌ನಲ್ಲಿ ಯುಪಿಐ ಬಳಸಲು ಒಪ್ಪಿಕೊಂಡಿವೆ. ಇನ್ನು ಮುಂದೆ ಫ್ರಾನ್ಸ್‌ನಲ್ಲೂ ರೂಪಾಯಿಯಲ್ಲೇ ವ್ಯವಹಾರ ಮಾಡಬಹುದು

ಪ್ಯಾರಿಸ್‌ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಫ್ರಾನ್ಸ್ ಮತ್ತು ಭಾರತ ಫ್ರಾನ್ಸ್‌ನಲ್ಲಿ ಯುಪಿಐ ಬಳಸಲು ಒಪ್ಪಿಕೊಂಡಿವೆ. ಮುಂಬರುವ ದಿನಗಳಲ್ಲಿ ಇದು ಐಫೆಲ್ ಟವರ್‌ನಿಂದ ಪ್ರಾರಂಭವಾಗಲಿದೆ. ಇನ್ನು ಮುಂದೆ ಫ್ರಾನ್ಸ್‌ನಲ್ಲಿರುವ ಅನಿವಾಸಿ ಭಾರತೀಯರು ಯುನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಬಳಸಿಕೊಂಡು ಭಾರತಲ್ಲಿರುವ ಸಂಬಂಧಿಕರಿಗೆ ಹಣವನ್ನು ಕಳುಹಿಸಬಹುದು ಜೊತೆಗೆ ಭಾರತದಿಂದ ತೆರಳಿದ ಪ್ರವಾಸಿಗರು ರೂಪಾಯಿಯಲ್ಲೇ ವ್ಯವಹಾರ ನಡೆಸಬಹುದು. ಭಾರತದಲ್ಲಿ ಅತ್ಯಂತ ಯಶಸ್ವಿಯಾಗಿರುವ ಪಾವತಿ ವ್ಯವಸ್ಥೆ ಯುಪಿಐ ಅನ್ನು ಫ್ರಾನ್ಸ್‌ನಲ್ಲೂ ಬಳಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯುಪಿಐ ಭಾರತದ ಮೊಬೈಲ್ ಆಧಾರಿತ ವೇಗದ ಪಾವತಿ ವ್ಯವಸ್ಥೆಯಾಗಿದೆ. ಇದು ಗ್ರಾಹಕರು ರಚಿಸಿದ ವರ್ಚುವಲ್ ಪಾವತಿ ವಿಳಾಸವನ್ನು ಬಳಸಿಕೊಂಡು ಗ್ರಾಹಕರಿಗೆ ಹಣ ಪಾವತಿಗಳನ್ನು ತ್ವರಿತವಾಗಿ ಮಾಡಲು ಅನುಕೂಲ ಮಾಡಿಕೊಡುತ್ತದೆ. ಯುಪಿಐ ಮೂಲಕ ಚಿಲ್ಲರೆ ಪಾವತಿಗಳನ್ನು ಭಾರತೀಯ ರೂಪಾಯಿಗಳಲ್ಲಿ ಮಾಡಲಾಗುವುದರಿಂದ ಇದು ವಿದೇಶೀ ವಿನಿಮಯ ಮೀಸಲುಗಳನ್ನು ಉಳಿಸಲು ಸಹಾಯ ಮಾಡುತ್ತದೆ.

Leave a Reply

Your email address will not be published. Required fields are marked *