ಜಾರಿ ನಿರ್ದೇಶನಾಯಲದ ಅಧಿಕಾರಿಗಳಿಂದ ಬಂಧನಕ್ಕೊಳಗಾದ ಒಂದು ದಿನದ ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ತಮ್ಮ ಜೀವನವನ್ನು ರಾಷ್ಟ್ರಕ್ಕೆ ಸಮರ್ಪಿಸಿದ್ದೇನೆ ಎಂದು ಹೇಳಿದ್ದಾರೆ.
ಜಾರಿ ನಿರ್ದೇಶನಾಲಯದಿಂದ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್, “ನನ್ನ ಜೀವನ ದೇಶಕ್ಕಾಗಿ ಸಮರ್ಪಿತವಾಗಿದೆ, ನಾನು ಕಂಬಿಗಳ ಹಿಂದೆ ಇದ್ದರೂ ದೇಶಕ್ಕೆ ಸೇವೆ ಸಲ್ಲಿಸುತ್ತೇನೆ” ಎಂದು ಹೇಳಿದರು.ಗುರುವಾರ ರಾತ್ರಿ 9 ಗಂಟೆ ಸುಮಾರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಇಂತಹ ಕ್ರಮವನ್ನು ಎದುರಿಸಿದ ಮೊದಲ ಮುಖ್ಯಮಂತ್ರಿ ಎಂಬ ಕುಖ್ಯಾತಿಗೆ ಪಾತ್ರರಾಗಿದ್ದಾರೆ. 2021-22 ರ ದೆಹಲಿ ಮದ್ಯದ ನೀತಿಗೆ ಸಂಬಂಧಪಟ್ಟಂತೆ ಮನಿ-ಲಾಂಡರಿಂಗ್ ಪ್ರಕರಣದಲ್ಲಿ ಅವರ ಬಂಧನವಾಗಿದೆ.
ಹಗರಣಕ್ಕೆ ಸಂಬಂಧಪಟ್ಟಂತೆ ಆಮ್ ಆದ್ಮಿ ಪಕ್ಷ ಮತ್ತು ಕೇಜ್ರಿವಾಲ್ ಅವರು ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ತನಿಖಾ ಸಂಸ್ಥೆ ಆರೋಪಿಸಿದೆ.