ಬಸವರಾಜ ಬೊಮ್ಮಾಯಿ ಅವರ ಬಜೆಟ್‌ಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯಿಸಿದೆ

ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2023-24ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಈ ಬಾರಿಯ ಒಟ್ಟು ಬಜೆಟ್ ಗಾತ್ರ 309182 ಕೋಟಿ ರೂಪಾಯಿಯಾಗಿದ್ದು, ಭರಪೂರ ಭರವಸೆಗಳನ್ನೇ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ ಅವರ ಬಜೆಟ್‌ಗೆ ಕಾಂಗ್ರೆಸ್ ಖಾರವಾಗಿ ಪ್ರತಿಕ್ರಿಯಿಸಿದೆ. “ಹಿಂದಿನ ಬಜೆಟ್‌ನ ಪ್ರಗತಿ 50% ಕೂಡ ದಾಟಿಲ್ಲ. ಚುನಾವಣೆಗಾಗಿ ಬಣ್ಣ ಬಣ್ಣದ ಘೋಷಣೆ ಮಾಡಿ ರಾಜ್ಯದ ಜನರ ಕಿವಿ ಮೇಲೆ ಹೂವಿಡುವ ಪ್ರಯತ್ನದಲ್ಲಿದ್ದಾರೆ ಅಷ್ಟೇ. ಯಾವುದೇ ಯೋಜನೆ ಬಗ್ಗೆ ಕೇಳಿದರೂ ಅನುದಾನವಿಲ್ಲ, ಹಣವಿಲ್ಲ ಎನ್ನುವವರ ಬಜೆಟ್‌ನಿಂದ ನಿರೀಕ್ಷೆ ಇಟ್ಟುಕೊಳ್ಳುವುದು ಮೂರ್ಖತನ” ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

Leave a Reply

Your email address will not be published. Required fields are marked *