ನಗರದ ಖಾಸಗಿ ಹೋಟೆಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ಇಂಧನ ಸಚಿವ ಕೆ.ಜೆ. ಜಾರ್ಜ್‌ಕರ್ನಾಟಕ ಸರ್ಕಾರದ 5 ಪ್ರಮುಖ ಭರವಸೆಗಳ ಪೈಕಿ ಒಂದಾದ ಗೃಹ ಜ್ಯೋತಿ ಯೋಜನೆಗೆ ಮುಖ್ಯಮಂತ್ರಿಯವರು ಕಲಬುರಗಿಯ ಎನ್‌ವಿ ಮೈದಾನದಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯಸಭೆಯ ಪತ್ರಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಐಟಿ ಬಿಟಿ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಸೇರಿದಂತೆ ಹಿರಿಯ ಸಚಿವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು ಎಂದರು.