ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ನಾಲ್ಕು ದಿನಗಳ ಭಾರತ ಪ್ರವಾಸಕ್ಕಾಗಿ ನವದೆಹಲಿಗೆ ಆಗಮಿಸಿದರು.ತಮ್ಮ ಭೇಟಿಯ ಸಮಯದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಉಪರಾಷ್ಟ್ರಪತಿ ಜಗದೀಪ್ ಧಂಖರ್ ಅವರನ್ನು ಭೇಟಿಯಾಗಲಿದ್ದಾರೆ. ಅವರು ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ದ್ವಿಪಕ್ಷೀಯ ಸಭೆಯನ್ನೂ ನಡೆಸಲಿದ್ದಾರೆ. ರಕ್ಷಣಾ ಸಹಕಾರವನ್ನು ನವೀಕರಿಸುವುದು, ಪ್ರಾದೇಶಿಕ ಸಂಪರ್ಕ ಉಪಕ್ರಮಗಳನ್ನು ವಿಸ್ತರಿಸುವುದು ಮತ್ತು ದಕ್ಷಿಣ ಏಷ್ಯಾದಲ್ಲಿ ಸ್ಥಿರತೆಯನ್ನು ಸ್ಥಾಪಿಸುವುದು ಅವರ ಭೇಟಿಯ ಉದ್ದೇಶವಾಗಿದೆ ಎನ್ನಲಾಗಿದೆ.