ಬಾಪು ಅವರ ಕಾಂಗ್ರೆಸ್ ವಿಸರ್ಜಿಸುವ ಕನಸು ನನಸಾಗುವ ಸಮಯ ಬಂದಿದೆ: ಯೋಗಿ ಆದಿತ್ಯನಾಥ್

ಗುಜರಾತ್‌ನ ಪೋರಬಂದರ್‌ನಲ್ಲಿ ಚುನಾವಣಾ ಪ್ರಚಾರದ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಕಾಂಗ್ರೆಸ್ ಅಧಿಕಾರದಲ್ಲಿದ್ದರೆ ಕೊರೊನ ಸಾಂಕ್ರಾಮಿಕ ಸಮಯದಲ್ಲಿ ಚಿಕಿತ್ಸೆ ಮತ್ತು ಲಸಿಕೆಗಾಗಿ ಮೀಸಲಾದ ಹಣವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿತ್ತು. ಬಿಕ್ಕಟ್ಟಿನ ಸಂದರ್ಭದಲ್ಲಿ ಕಾಂಗ್ರೆಸ್ ಎಂದಿಗೂ ಜನರೊಂದಿಗೆ ನಿಲ್ಲುವುದಿಲ್ಲ. ಭಾರತಕ್ಕೆ ಸ್ವಾತಂತ್ರ‍್ಯ ಬಂದ ನಂತರ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೆಂದು ಗಾಂಧಿ ಸೂಚಿಸಿದ್ದರು. ಅಧಿಕಾರದಸೆಗೆ ಅದನ್ನು ಮುಂದುವರಿಸಲಾಯಿತು. ಕಾಂಗ್ರೆಸ್‌ಗಿಂತ ಭಿನ್ನವಾಗಿ ಬಿಜೆಪಿ ಯಾವಾಗಲೂ ತನ್ನ ಭರವಸೆಗಳನ್ನು ಈಡೇರಿಸುತ್ತ ಬಂದಿದೆ . ಬಿಜೆಪಿಗೆ ಜನರು ಅಭೂತಪೂರ್ವ ಬೆಂಬಲ ನೀಡುತ್ತಿದ್ದಾರೆ. ಹೀಗಾಗಿ ಬಾಪು ಅವರ ಕಾಂಗ್ರೆಸ್ ಅನ್ನು ವಿಸರ್ಜಿಸುವ ಕನಸು ನನಸಾಗುವ ಸಮಯ ಬಂದಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *