ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಜನವರಿ 16 ರಿಂದ 2 ದಿನಗಳ ಕಾಲ ಪ್ರಮುಖ ಬಿಜೆಪಿ ಕಾರ್ಯಕಾಋನಿ ಸಭೆ ನಡೆಯುತ್ತಿದ್ದು, ಈ ಸಭೆಯಲ್ಲಿ ಹಲವು ಪ್ರಮುಖ ವಿಚಾರಗಳ ಬಗ್ಗೆ. ಕರ್ನಾಟಕದ ಮುಂಬರುವ ವಿಧಾನಸಭೆ ಚುನಾವಣೆ ಬಗ್ಗೆ ವಿಸ್ತೃತವಾದ ಚರ್ಚೆ ನಡೆಯುತ್ತಿದೆ. ಈ ಮಧ್ಯೆ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯ ನಡುವೆ, ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಸೋಮವಾರ 15 ನಿಮಿಷಗಳ ಕಾಲ ಸಭೆ ನಡೆಸಿದ್ದಾರೆ. ಈ ಹಿನ್ನೆಲೆ ಮಾಜಿ ಸಿಎಂ ಹಾಗೂ ಪ್ರಸ್ತುತ ಬಿಜೆಪಿಯ ಕೇಂದ್ರ ಸಂದೀಯ ಮಂಡಳಿ ಸದಸ್ಯರಾಗಿರುವ ಯಡಿಯೂರಪ್ಪ ಅವರೊಂದಿಗಿನ ಮಾತುಕತೆಯಲ್ಲಿ ಯಾವ ವಿಚಾರಗಳು ಚರ್ಚೆ ನಡೆದಿದೆ ಎಂಬುದು ಹಲವರಲ್ಲಿ ಕುತೂಹಲ ಕೆರಳಿಸಿದೆ. ರಾಜ್ಯ ಚುನಾವಣೆ ಹತ್ತಿರವಾಗುತ್ತಿದ್ದಂತೆ ಈ ಮಾತುಕತೆ ನಡೆದಿರೋದು ಪ್ರಮುಖ ಎನಿಸಿಕೊಂಡಿದೆ. ಪ್ರಧಾನಿ ಮೋದಿಯವರೊಂದಿಗೆ ಯಡಿಯೂರಪ್ಪ ಭೇಟಿಯಾಗಿರುವುದು ಕರ್ನಾಟಕದಲ್ಲಿ 4 ಬಾರಿ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪಗೆ ಮತ್ತೆ ಅದೃಷ್ಟದ ತಿರುವು ಸಿಗುತ್ತಾ ಅನ್ನೋ ಊಹಾಪೋಹ ಹುಟ್ಟುಹಾಕಿದೆ.ಈ ವರ್ಷ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದು.