ಸದಾಶಿವನಗರ ನಿವಾಸ ಹಾಗೂ ಶೇಷಾದ್ರಿಪುರ ಅಪೋಲೋ ಆಸ್ಪತ್ರೆ ಬಳಿ ಮಾಧ್ಯಮಗಳೊಂದಿಗೆ ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕೋವಿಡ್‌ಹಗರಣ, ಆಕ್ಸಿಜನ್‌ದುರಂತ, ಪಿಎಸ್‌ಐ ಹಗರಣ ಸೇರಿದಂತೆ ನಾವು ನೂರಾರು ಆರೋಪ ಮಾಡಿದ್ದೇವೆ. ಅವರು ಯಾವ ರೀತಿ ತನಿಖೆ ಮಾಡಿದ್ದರು ಎಂಬುದು ನಮಗೆ ಗೊತ್ತಿದೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವು ಮುಂದುವರಿಯುತ್ತಾ ಇದ್ದೇವೆ. ಬಿಜೆಪಿಯವರು ಪ್ರಾಮಾಣಿಕರಾಗಿದ್ದರೆ ನ್ಯಾಯಾಂಗ ತನಿಖೆ ಬಗ್ಗೆ ಭಯವೇಕೆ ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಕೋವಿಡ್ ಹಗರಣಗಳನ್ನ ನ್ಯಾಯಾಂಗ ತನಿಖೆಗೆ ಆದೇಶಿಸಿರುವುದರ ಹಿಂದೆ ದ್ವೇಷದ ರಾಜಕೀಯವಿದೆ ಎಂಬ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.