ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಚಿವ ಎಂ.ಬಿ. ಪಾಟೀಲ್ ಅವರು, ಬಿಜೆಪಿಯವರಾರು ಸ್ವಾತಂತ್ರ್ಯ ಹೋರಾಟ ಮಾಡಿಲ್ಲ. ಸ್ವಾತಂತ್ರ್ಯ ಕೊಡಿಸಿದ್ದು ಕಾಂಗ್ರೆಸ್. ಬಿಜೆಪಿಯಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅವಶ್ಯಕತೆ ಇಲ್ಲ 2014 ರಿಂದ ದೇಶ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಬದುಕೋಕು ಬಿಡಲ್ಲ ಸಾಯೋಕು ಬಿಡಲ್ಲ ಸತ್ತ ಮೇಲೂ ಬಿಡೋದಿಲ್ಲ ಅಷ್ಟೊಂದು ಜಿಎಸ್‍ಟಿ ಹಾಕ್ತಾರೆ. ಹಿಂದುತ್ವ ಭಾವನೆ ಕೆರಳಿಸುತ್ತಾ ಚುನಾವಣೆ ಮಾಡ್ತಾರೆ. 40% ಭ್ರಷ್ಟಾಚಾರ ಮಾಡ್ತಾರೆ. ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆಂದು 2018ರಲ್ಲಿ ಲಿಂಗಾಯತರು ಬಿಜೆಪಿಗೆ ಮತ ಹಾಕಿದ್ರು. ಈಗ ಪರಿಸ್ಥಿತಿ ಹಾಗಿಲ್ಲ ಈಗ ಲಿಂಗಾಯತರು ಕಾಂಗ್ರೆಸ್ ಬೆಂಬಲಿಸ್ತಾರೆ ಎಂದರು.