ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಪರ ಭರ್ಜರಿ ಪ್ರಚಾರ ಕೈಗೊಂಡಿರುವ ಎಐಸಿಸಿ ಪ್ರಧಾನ ಕಾರ್ಯದಶಿ ಪ್ರಿಯಾಂಕಾ ಗಾಂಧಿ, ಮಂಗಳವಾರ ಮಂಡ್ಯ, ಚಿಂತಾಮಣಿ, ಹೊಸಕೋಟೆಗಳಲ್ಲಿ ಕಾಂಗ್ರೆಸ್‌ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದರು. ಈ ಮಧ್ಯೆ, ಮಂಡ್ಯದಲ್ಲಿ ಮಾತನಾಡಿ, ರಾಜ್ಯದಲ್ಲಿರುವ ಬಿಜೆಪಿ ಸರ್ಕಾರ ಒಂದು ಲೂಟಿಕೋರ ಸರ್ಕಾರ. ಈ ಬಿಜೆಪಿ ಅಧಿಕಾರಾವಧಿಯಲ್ಲಿ ಎಲ್ಲವೂ ದುಬಾರಿಯಾಗಿದೆ. ದಿನಬಳಕೆಯ ಎಲ್ಲಾ ಪದಾರ್ಥಗಳ ಬೆಲೆ ಗಗನಕ್ಕೇರಿದೆ. ಬಿಜೆಪಿ ಸರ್ಕಾರ ಬೆಲೆ ಏರಿಕೆಯಿಂದ ಜನರ ಬದುಕನ್ನು ಸಂಕಷ್ಟಕ್ಕೆ ದೂಡಿದೆ. ಅನ್ನದಾತರಿಂದಲೂ ಜಿಎಸ್‌ಟಿ ವಸೂಲಿ ಜಿಎಸ್‌ಟಿಯಿಂದ ರಸಗೊಬ್ಬರ ಬೆಲೆ ಕೂಡ ದುಬಾರಿ ರೈತರ ರಕ್ತ ಹೀರುತ್ತಿದೆ ಬಿಜೆಪಿ ಸರ್ಕಾರ ಇದುವರೆಗೆ ರೈತರಿಗೆ ಕೊಟ್ಟ ಭರವಸೆಗಳಲ್ಲಿ ಒಂದನ್ನೂ ಈಡೇರಿಸಿಲ್ಲ. ಕೊಟ್ಟಭರವಸೆಗಿಂತ ದರ ಹೆಚ್ಚಳವೇ ದುಬಾರಿಯಾಗಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ನೀಡಲು ಸರ್ಕಾರದಿಂದ ಸಾಧ್ಯವಾಗಿಲ್ಲ. ಎಂದು ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು.