ತಾಲೂಕಿನ ಗೋಳೂರು ಗ್ರಾಮದ ಬಳಿ ಕಾಂಗ್ರೆಸ್‌ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬಿಜೆಪಿ ಕುತಂತ್ರ, ಷಡ್ಯಂತ್ರ ಮಾಡುವುದರಲ್ಲಿ ನಿಸ್ಸೀಮರು. ಬಿಜೆಪಿ ಮತ್ತು ಜೆಡಿಎಸ್‌ಒಳ ಒಪ್ಪಂದ ಮಾಡಿಕೊಂಡು ನನ್ನನ್ನು ಹೇಗಾದರೂ ಮಾಡಿ ಸೋಲಿಸಬೇಕೆಂಬ ದೃಷ್ಟಿಯಿಂದ ದಲಿತರ ಮತ ವಿಭಜನೆಯಾಗಲಿ ಎಂದು ಮಾಜಿ ಶಾಸಕ ಡಾ.ಭಾರತೀಶಂಕರ್‌ರನ್ನು ಕಣಕ್ಕಿಳಿಸಿದೆ ವರುಣ ಕ್ಷೇತ್ರದ ಜನ ಇದಕ್ಕೆ ಸೊಪ್ಪು ಹಾಕದೆ ದೊಡ್ಡಮಟ್ಟದ ಅಂತರದಿಂದ ನನ್ನನ್ನು ಗೆಲ್ಲಿಸಲಿದ್ದಾರೆ ಎಂಬ ಸಂಪೂರ್ಣ ವಿಶ್ವಾಸವಿದೆ ರಾಜ್ಯದ ಜನ ಕಾಂಗ್ರೆಸ್‌ಅಧಿಕಾರಕ್ಕೆ ಬರಬೇಕೆಂದು ಬಯಸಿದ್ದಾರೆ ಎಂದು ಹೇಳಿದರು.