ಬಿಜೆಪಿ ಭರ್ಜರಿ ಜಯಗಳಿಸಿದ್ದು ಜಯಗಳಿಸಿದ ಬೆನ್ನಲ್ಲೇ ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ಹೆಚ್ಚಳ – ದಾಖಲೆ ಬರೆದ ಸೆನ್ಸೆಕ್ಸ್‌

ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢದಲ್ಲಿ ಬಿಜೆಪಿ ಭರ್ಜರಿ ಜಯಗಳಿಸಿದ್ದು ಜಯಗಳಿಸಿದ ಬೆನ್ನಲ್ಲೇ ಬಾಂಬೆ ಷೇರು ಮಾರುಕಟ್ಟೆ ಸಂವೇದಿ ಸೂಚಂಕ್ಯ ಸೆನ್ಸೆಕ್ಸ್‌ ಸಾರ್ವಕಾಲಿಕ ಎತ್ತರಕ್ಕೆ ಜಿಗಿದು ದಾಖಲೆ ಬರೆದಿದೆ. ಹೂಡಿಕೆದಾರರು ಭಾರೀ ಪ್ರಮಾಣದಲ್ಲಿ ಹೂಡಿಕೆ ಮಾಡಿದ ಪರಿಣಾಮ ಸೆನ್ಸೆಕ್ಸ್‌ ಮತ್ತು ರಾಷ್ಟ್ರೀಯ ಷೇರು ಮಾರುಕಟ್ಟೆ ಸೂಚಂಕ್ಯ ನಿಫ್ಟಿ ಭರ್ಜರಿ ಏರಿಕೆ ಕಂಡಿದೆ. ಹೂಡಿಕೆದಾರರ ಸಂಪತ್ತು ಒಂದೇ ದಿನ 6 ಲಕ್ಷ ಕೋಟಿ ರೂ. ಹೆಚ್ಚಳವಾಗಿದೆ. ಶುಕ್ರವಾರ 67,481.19 ಅಂಕಗಳಿಗೆ ಸೆನ್ಸೆಕ್ಸ್‌ ಕೊನೆಯಾಗಿತ್ತು. ಇಂದು ಒಂದೇ ದಿನ 1,383.93 ಅಂಕ ಏರಿಕೆಯಾಗಿ ಅಂತಿಮವಾಗಿ 68,865.12 ಅಂಕಗಳಿಗೆ ದಿನದ ವಹಿವಾಟು ಮುಗಿಸಿತು. ಒಂದು ಹಂತದಲ್ಲಿ ಸೆನ್ಸೆಕ್ಸ್‌ 68,918 ಅಂಕಗಳಿಗೆ ಏರಿತ್ತು. 

Leave a Reply

Your email address will not be published. Required fields are marked *