ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ ಸದನದಲ್ಲಿ ಗುಡುಗಿದ ಸಿದ್ದರಾಮಯ್ಯ

ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ ಮೇಲೆ ನಡೆದ ಚರ್ಚೆಗೆ ಉತ್ತರ ನೀಡಿದ ಮುಖ್ಯಮಂತ್ರಿಗಳು ಬಿಜೆಪಿ ರಾಜ್ಯದಲ್ಲಿ ಇವತ್ತಿನವರೆಗೂ ಸ್ವಂತ ಬಲದಿಂದ ಅಧಿಕಾರಿಕ್ಕೆ ಬಂದೇ ಇಲ್ಲ: ಹಿಂಬಾಗಿಲಲ್ಲಿ ಬಂದಿದ್ದಾರೆ ಅಷ್ಟೆ. ಬಿಜೆಪಿಯಿಂದ ಯಡಿಯೂರಪ್ಪ, ಬೊಮ್ಮಾಯಿ, ಶೆಟ್ಟರ್, ಸದಾನಂದ ಗೌಡ ಮುಖ್ಯಮಂತ್ರಿ ಆದರು. ಇವರ್ಯಾರೂ ಸ್ಪಷ್ಟ ಬಹುಮತ ಪಡೆದು ಮುಖ್ಯಮಂತ್ರಿ ಆದವರಲ್ಲ ಇದ್ದರೆ ತೋರಿಸಿ ಎಂದು ಸದನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುಡುಗಿದ್ದಾರೆ.
ನಾವು 2013 ರಲ್ಲಿ 2023 ರಲ್ಲಿ ಸ್ಪಷ್ಟ ಬಹುಮತದ ಮೂಲಕ ಅಧಿಕಾರಕ್ಕೆ ಬಂದಿದ್ದೇವೆ. ಜನ ನಮ್ಮನ್ನು ತಿರಸ್ಕರಿಸಿ ವಿರೋಧ ಪಕ್ಷದಲ್ಲಿ ಕೂರಿಸಿದಾಗಲೂ ತಲೆಬಾಗಿ ಜನರ ತೀರ್ಮಾನವನ್ನು ಒಪ್ಪಿಕೊಂಡು ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಿ ಮತ್ತೆ ಅಧಿಕಾರಕ್ಕೆ ಬಂದಿದ್ದೇವೆ. ನಾವು ಸುಳ್ಳುಗಳ ಆಸರೆಗೆ ಹೋಗಲಿಲ್ಲ.ನಾವು ಅಧಿಕಾರಕ್ಕೆ ಬಂದ ಕೇವಲ 9 ತಿಂಗಳಲ್ಲಿ 77 ಸಾವಿರ ಕೋಟಿ ಹೂಡಿಕೆ ಬಂದಿರುವುದೇ ರಾಜ್ಯದ ಕಾನೂನು ಸುವ್ಯವಸ್ಥೆ ಸುಗಮ ಆಗಿರುವುದಕ್ಕೆ ಸಾಕ್ಷಿ.

Leave a Reply

Your email address will not be published. Required fields are marked *