ಮದ್ದೂರಿನಲ್ಲಿ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಸಂಸದೆ ಸುಮಲತಾ ಅಂಬರೀಶ್, ಮಂಡ್ಯ ಕ್ಷೇತ್ರದಿಂದ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸುವ ಬಗ್ಗೆ ವದಂತಿ ಹರಡಿದೆ. ಹಾಗೊಮ್ಮೆ ಅವರು ಸ್ಪರ್ಧಿಸುವುದು ನಿಜವಾಗಿದ್ದಲ್ಲಿ ಸ್ಪರ್ಧೆಗೆ ನಾನು ಸಿದ್ಧ. ಬಿಜೆಪಿ ವರಿಷ್ಠರು ಸೂಚನೆ ನೀಡಿದರೆ ಮಂಡ್ಯ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಎದುರು ಚುನಾವಣೆಗೆ ಸ್ಪರ್ಧಿಸಲು ಸಿದ್ಧನಿದ್ದೇನೆ. ಜಿಲ್ಲೆಯ ಜನರು ಬದಲಾವಣೆ ಬಯಸುತ್ತಾರೆ. ಹಾಗಾಗಿ ಅಚ್ಚರಿಯ ಫಲಿತಾಂಶವನ್ನು ಅವರು ನೀಡಲಿದ್ದಾರೆಂಬ ಭರವಸೆ ಇದೆ ಎಂದು ವಿಶ್ವಾಸದಿಂದ ನುಡಿದರು.