ಬಿಜೆಪಿ ಸಂಸದೀಯ ಮಂಡಳಿಗೆ ಹೊಸ ಸೇರ್ಪಡೆಯಾಗಿ ಬಿಎಸ್ ಯಡಿಯೂರಪ್ಪ, ಸರ್ಬಾನಂದ ಸೋನೋವಾಲ್, ಕೆ ಲಕ್ಷ್ಮಣ್, ಇಕ್ಬಾಲ್ ಸಿಂಗ್ ಲಾಲ್ಪುರ, ಸತ್ಯನಾರಾಯಣ್ ಜಟಿಯಾ, ಸುಧಾ ಯಾದವ್ ಅವರನ್ನು ಸೇರಿಸಲಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯಿಂದ ಕೈಬಿಡಲಾಗಿದೆ ಕರ್ನಾಟಕದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿಗೆ ಸೇರ್ಪಡೆ ಮಾಡಲಾಗಿದೆ. ಜೊತೆಗೆ ಪಕ್ಷದ ಸಂಸದೀಯ ಮಂಡಳಿಯಲ್ಲೂ ಸ್ಥಾನ ನೀಡಲಾಗಿದೆ. ಬಿಜೆಪಿ ಕೇಂದ್ರ ಚುನಾವಣಾ ಸಮಿತಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ, ದೇವೇಂದ್ರ ಫಡ್ನವಿಸ್ ಸೇರಿದಂತೆ ಇತರ 15 ಸದಸ್ಯರಿದ್ದಾರೆ.