ಬಿಪೊರ್ ಜಾಯ್ ಚಂಡಮಾರುತ ಅಬ್ಬರ ಗುಜರಾತ್‌ನ ಕಚ್ ಪ್ರದೇಶಕ್ಕೆ ಅಪ್ಪಳಿಸುವ ಸಾಧ್ಯತೆ ಮೋದಿಯಿಂದ ಉನ್ನತ ಮಟ್ಟದ ಸಭೆ

ನೈಋತ್ಯ ಮುಂಗಾರಿನ ಜೊತೆಗೆ ದೇಶದ ವಿವಿಧ ರಾಜ್ಯಗಳಲ್ಲಿ ‘ಬಿಪೊರ್ ಜಾಯ್’ ಚಂಡಮಾರುತ ಅಬ್ಬರ ಜೋರಾಗಿದೆ. ‘ಬಿಪೊರ್ ಜಾಯ್’ ಚಂಡಮಾರುತ ಗುಜರಾತ್‌ನ ಕಚ್ ಪ್ರದೇಶಕ್ಕೆ ಸೋಮವಾರ ಅಪ್ಪಳಿಸುವ ಸಾಧ್ಯತೆ ಇದೆ. ಆದ್ದರಿಂದ ಪ್ರಧಾನಿ ನರೇಂದ್ರ ಮೋದಿ ಪರಿಸ್ಥಿತಿ ಕುರಿತು ಮಾಹಿತಿ ಪಡೆಯಲು ಉನ್ನತ ಮಟ್ಟದ ಸಭೆಯನ್ನು ಕರೆದಿದ್ದಾರೆ.ಗುಜರಾತ್ ರಾಜ್ಯದ ಕರಾವಳಿ ಪ್ರದೇಶಗಳಾದ ಸೌರಾಷ್ಟ್ರ ಮತ್ತು ಕಚ್ ಪ್ರದೇಶಕ್ಕೆ ಭಾರತೀಯ ಹವಾಮಾನ ಇಲಾಖೆ ಅಲರ್ಟ್‌ಘೋಷಣೆ ಮಾಡಿದೆ. ಈ ಪ್ರದೇಶಗಳಲ್ಲಿ ಸಮುದ್ರದ ಅಲೆಗಳ ಅಬ್ಬರವೂ ಹೆಚ್ಚಾಗಿರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಬುಧವಾರದ ತನಕ ಇದೇ ಪರಿಸ್ಥಿತಿ ಇರಲಿದೆ ಎಂದು ಅಂದಾಜಿಸಲಾಗಿದೆ.

Leave a Reply

Your email address will not be published. Required fields are marked *