ಚಿಲುಮೆ ಸಂಸ್ಥೆಯಿಂದ ನಡೆದ ಮತದಾರರ ಮಾಹಿತಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ವಕ್ತಾರ ರಮೇಶ್ ಬಾಬು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷ, ಸಚಿವರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಮತದಾರರ ಪಟ್ಟಿಯಲ್ಲಿ ಹೆಸರು ಕೈಬಿಡುವ, ತಮಗೆ ಅನುಕೂಲವಾಗುವ ಮತದಾರರ ಹೆಸರು ಸೇರಿಸಲಾಗಿದೆ.
ನಕಲಿ ಬಿಎಲ್ಒ ಗುರುತಿನ ಚೀಟಿ ವಿತರಣೆ ಹೊಣೆಯನ್ನು ತುಷಾರ್ ಗಿರಿನಾಥ್ ಅವರೇ ಹೊರಬೇಕು. ಹೀಗಾಗಿ ಕೇಂದ್ರ ಚುನಾವಣಾ ಆಯೋಗ ತುಷಾರ್ ಗಿರಿನಾಥ್ ಅವರನ್ನು ಚುನಾವಣಾಧಿಕಾರಿ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕು. ಅವರು ಹಿರಿಯ ಐಎಎಸ್ ಅಧಿಕಾರಿಯಾಗಿರುವ ಹಿನ್ನೆಲೆಯಲ್ಲಿ ವಿಚಾರಣೆ ಬಾಕಿಗೆ ಒಳಪಟ್ಟು ಅವರನ್ನು ಅಮಾನತು ಮಾಡುವಂತೆ ರಾಜ್ಯ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕು ಎಂದು ಕಾಂಗ್ರೆಸ್ ಪಕ್ಷದ ಪರವಾಗಿ ಒತ್ತಾಯಿಸುತ್ತೇವೆ ಎಂದಿದ್ದಾರೆ.