ಬಿಬಿಎಂಪಿ ಕಂದಾಯಾಧಿಕಾರಿಗಳಿಗೆ ಮಾನಸಿಕ ಹಿಂಸೆ- ಜೀವ ರಕ್ಷಣೆ ಮಾಡಿ: ಸಂಘದ ಅಧ್ಯಕ್ಷ ಎ.ಅಮೃತ್ ರಾಜ್

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ವತಿಯಿಂದ ಇಂದು ಬಿಬಿಎಂಪಿ ಕೇಂದ್ರ ಕಚೇರಿ ಆವರಣದಲ್ಲಿರುವ ನೌಕರರ ಭವನದಲ್ಲಿ ಏರ್ಪಡಿಸಲಾಗಿತ್ತು. ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಎ.ಅಮೃತ್ ರಾಜ್, ಬಿಬಿಎಂಪಿ ನೀಡಿರುವ ದೂರಿನನ್ವಯ ಕಂದಾಯಾಧಿಕಾರಿಗಳನ್ನು ರೆಪ್ರೆಸೆಂಟೇಷನ್ ಆಫ್ ಪಬ್ಲಿಕ್ ಆಕ್ಟ್ ಪ್ರಕಾರ ಏಕಾಏಕಿ ಬಂಧಿಸಿರುವುದು ಸೂಕ್ತವಲ್ಲ. ಬದಲಿಗೆ ಅಕ್ರಮ ಎಸಗಿದೆ ಎನ್ನಲಾದ ಚಿಲುಮೆ ಸಂಸ್ಥೆ ಮೇಲೆ ಕ್ರಮ ಕೈಗೊಳ್ಳಬೇಕು. ಬಿಬಿಎಂಪಿ ಅಧಿಕಾರಿಗಳು ಪೊಲೀಸ್ ಮತ್ತು CEO ನಡೆಸುವ ತನಿಖೆಗೆ ಸಿದ್ಧವಿದ್ದು ಅವರಿಗೆ ಮಾನಸಿಕವಾಗಿ ಹಿಂಸೆ ನೀಡಬಾರದು. ಯಾವುದಾದರೂ ಒಂದು ಸಂಸ್ಥೆ ತನಿಖೆಯನ್ನು ಮಾಡಲಿ ಎರಡು-ಮೂರು ಪೊಲೀಸ್ ಠಾಣೆಗಳು ಅಥವಾ ವಿವಿಧ ಸಂಸ್ಥೆಗಳು ಭಾಗಿಯಾಗಿ ಬಿಬಿಎಂಪಿ ಅಧಿಕಾರಿಗಳಿಗೆ ಮಾನಸಿಕ ಹಿಂಸೆ ನೀಡಬಾರದು. ಈ ವೇಳೆ ಸಂಘದ ಉಪ ಆಯುಕ್ತರಾದ ಲಕ್ಷ್ಮೀದೇವಿ, ವಕೀಲರಾದ ಶ್ರೀನಿವಾಸ್, ಅಧಿಕಾರಿಗಳಾದ ಕೆ.ಜಿ.ರವಿ,ಶಾಂತೇಶ್, ಸಂಘದ ಪದಾಧಿಕಾರಿಗಳಾದ ಎಸ್.ಜಿ.ಸುರೇಶ್, ಸಾಯಿಶಂಕರ್, ರಾಮಚಂದ್ರ,ಕೆ.ಮಂಜೇಗೌಡ, ಸಂತೋಷ್ ಕುಮಾರ್ ನಾಯಕ್, ರುದ್ರೇಶ್, ನರಸಿಂಹ, ಬಾಬಣ್ಣ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *