ಬಿಬಿಎಂಪಿ ಚುನಾವಣೆ ಇನ್ನೂ 4 ತಿಂಗಳು ಇಲ್ಲ, ಸರ್ಕಾರಕ್ಕೆ ದೊಡ್ಡ ರಿಲೀಫ್‌ಸಿಕ್ಕಿದೆ

ಬಿಬಿಎಂಪಿ ಸೇರಿ ಸ್ಥಳೀಯ ಸಂಸ್ಥೆಗಳಿಗೆ ನಡೆಯಬೇಕಿದ್ದ ಚುನಾವಣೆ ವಿಚಾರದಲ್ಲಿ ಸರ್ಕಾರಕ್ಕೆ ದೊಡ್ಡ ರಿಲೀಫ್‌ಸಿಕ್ಕಿದೆ. ಚುನಾವಣೆ ನಡೆಸಲು ರಾಜ್ಯ ಸರ್ಕಾರಕ್ಕೆ ನ್ಯಾಯಾಲಯದಿಂದ ಮತ್ತಷ್ಟು ದಿನಗಳ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ರಾಜಕೀಯ ಪ್ರಾತಿನಿಧ್ಯ ನೀಡಬೇಕಿರುವ ಹಿನ್ನೆಲೆಯಲ್ಲಿ ಸರ್ಕಾರಕ್ಕೆ ಚುನಾವಣೆ ನಡೆಸಲು ಸುಪ್ರೀಂ ಕೋರ್ಟ್‌ಮಾ.31ರ ತನಕ ಗಡುವು ನೀಡಿದೆ. ನ್ಯಾಯಮೂರ್ತಿ ಅಬ್ದುಲ್‌ನಾಸೀರ್‌ಹಾಗೂ ನ್ಯಾ.ಹಿಮಾಕೊಹ್ಲಿ ಅವರಿದ್ದ ದ್ವಿಸದಸ್ಯ ಪೀಠದ ಮುಂದೆ ಗುರುವಾರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣೆ ನಡೆಸದಿರುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂದಿತ್ತು. ಈ ವೇಳೆ ಕರ್ನಾಟಕ ಸರ್ಕಾರದ ಪರ ಸಾಲಿಸಿಟರ್‌ಜನರಲ್‌ತುಷಾರ್‌ಮೆಹ್ತಾ ವಾದ ಮಂಡಿಸಿದರು. ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ನೀಡಬೇಕಿದೆ. ಇದಕ್ಕಾಗಿ ನ್ಯಾ.ಭಕ್ತವತ್ಸಲಂ ಅವರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಮಾಹಿತಿ ಮತ್ತು ಅಂಕಿ-ಅಂಶಗಳನ್ನು ಸಂಗ್ರಹಿಸುತ್ತಿದೆ. ಮೀಸಲಾತಿ ಬಗ್ಗೆ ವರದಿ ನೀಡಲು ಮತ್ತಷ್ಟು ಸಮಯ ಬೇಕು ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ರಾಜ್ಯ ಚುನಾವಣಾ ಆಯೋಗದ ವಕೀಲರು, ಸಕಾಲಕ್ಕೆ ನಡೆಯಬೇಕಿದ್ದ ಚುನಾವಣೆ ನಡೆದಿಲ್ಲ. ಇದರಿಂದ ತುಂಬ ವಿಳಂಬವಾಗುತ್ತಿದೆ ಎಂದರು.

Leave a Reply

Your email address will not be published. Required fields are marked *