ಎರಡು ವರ್ಷಗಳಿಂದ ಬಾಕಿ ಇರುವ ಬಿಬಿಎಂಪಿ ಚುನಾವಣೆ ನಡೆಸಲು ಸರ್ಕಾರದ ಮತ್ತೆ ಪ್ರಯತ್ನ ಆರಂಭಿಸಿದೆ. ಹೈಕೋರ್ಟ್ 2022ರ ಡಿಸೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಬೇಕೆಂದು ಆದೇಶ ನೀಡಿದ ಎರಡು ತಿಂಗಳ ನಂತರ ಎಚ್ಚೆತ್ತುಕೊಂಡಿರುವ ಸರ್ಕಾರ ಇದೀಗ ಮತ್ತೆ ಕಾಲಾವಕಾಶ ಕೇಳಿದೆ. ಈ ಕುರಿತು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿರುವ ನಗರಾಭಿವೃದ್ಧಿ ಇಲಾಖೆ ಹಿಂದುಳಿದ ವರ್ಗಗಳ ಮೀಸಲಾತಿ ಸಂಬಂಧ ನ್ಯಾ. ಭಕ್ತವವತ್ಸಲ ಸಮಿತಿಯಿಂದ ಮಾಹಿತಿ ಕೇಳಲಾಗಿದೆ. ಅದು ರಾಜಕೀಯ ಹಿಂದುಳಿದಿರುವಿಕೆ ಬಗ್ಗೆಯೂ ಮಾಹಿತಿ ನೀಡಲು ನ್ಯಾ. ಭಕ್ತವತ್ಸಲ ಸಮಿತಿ ಕಾಲಾವಕಾಶ ಕೇಳಿದೆ. ಹಾಗಾಗಿ 3 ತಿಂಗಳು ಕಾಲಾವಕಾಶ ನೀಡುವಂತೆ ಮನವಿ ಮಾಡಿದೆ.