ಸೋಮವಾರ ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಕೆಆರ್ ಐಡಿಎಲ್ ವತಿಯಿಂದ ನಿರ್ಮಾಣವಾಗುತ್ತಿರುವ ವಾಣಿಜ್ಯ ಕಟ್ಟಡಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಬೆಂಗಳೂರು ನಾಲ್ಕೂ ದಿಕ್ಕುಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರ. ಇದಕ್ಕಾಗಿ ಹೆಚ್ಚಿನ ಸಂಖ್ಯೆಯಲ್ಲಿ ಸಿಬ್ಬಂದಿ, ಇಂಜಿನಿಯರ್ಸ್, ಜಂಟಿ ಆಯುಕ್ತರನ್ನೂ ನೇಮಿಸಲಾಗುತ್ತಿದೆ. ಆದರೆ ಈ ಅಧಿಕಾರಿಗಳಿಗೆ ಸ್ಥಳದ ಅಭಾವದಿಂದ ಮುಖ್ಯ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವಂತಾಗಿದೆ. ಪ್ರತಿ ವರ್ಷ ಸರ್ಕಾರಿ ಕಚೇರಿಗಳ ನಿರ್ಮಾಣಕ್ಕೆ ಸರ್ಕಾರ ಹಣ ವ್ಯಯಿಸುತ್ತದೆ. ಬಿಬಿಎಂಪಿ ಹಾಗೂ ಬಿಡಿಎ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.