ಬುಧವಾರ ಇಸ್ರೇಲ್‌ಗೆ ಯುಎಸ್ ಅಧ್ಯಕ್ಷ ಜೋ ಬಿಡೆನ್ ಭೇಟಿ

ಇಸ್ರೇಲ್ ಹಮಾಸ್ ಉಗ್ರರ ನಡುವಿನ ಸಂಘರ್ಷ 11ನೇ ದಿನಕ್ಕೆ ಕಾಲಿಟ್ಟಿದೆ. ಯುದ್ಧ ಆರಂಭವಾದ ದಿನದಿಂದಲೂ ಇಸ್ರೇಲ್ ಜೊತೆಗೆ ನಿಂತಿರುವ ಅಮೆರಿಕ ಎಲ್ಲಾ ರೀತಿಯ ಸಹಾಯ ಮಾಡುತ್ತಿದೆ. ಯುದ್ದ ನೌಕೆ, ಯುದ್ಧ ವಿಮಾನಗಳನ್ನು ಕೂಡ ಇಸ್ರೇಲ್‌ಗೆ ಕಳುಹಿಸಿಕೊಟ್ಟಿದೆ, ಗಾಜಾ ಪ್ರದೇಶದಲ್ಲಿ ಸಂಪೂರ್ಣ ಮಿಲಿಟರಿ ಕಾರ್ಯಾಚರಣೆಗೆ ಇಸ್ರೇಲ್ ಸಜ್ಜಾಗುತ್ತಿರುವ ಹೊತ್ತಿನಲ್ಲೇ ಯುನೈಟೆಡ್ ಸ್ಟೇಟ್ಸ್ ಅಧ್ಯಕ್ಷ ಜೋ ಬಿಡನ್ ಬುಧವಾರ ಇಸ್ರೇಲ್‌ಗೆ ಭೇಟಿ ನೀಡಲು ಸಿದ್ಧರಾಗಿದ್ದಾರೆ.
ಎಂದು ವಿದೇಶಾಂಗ ಕಾರ್ಯದರ್ಶಿ ಆಂಟೋನಿ ಬ್ಲಿಂಕೆನ್ ಬೆಳಗ್ಗೆ ಇಸ್ರೇಲ್‌ನಲ್ಲಿ ಘೋಷಣೆ ಮಾಡಿದ್ದಾರೆ. ಯುದ್ಧದ ಸಂದರ್ಭದಲ್ಲಿ ಬಿಡೆನ್ ಇಸ್ರೇಲ್ ಭೇಟಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾ ರಿ ಮಹತ್ವ ಪಡೆದುಕೊಂಡಿದೆ.

Leave a Reply

Your email address will not be published. Required fields are marked *