ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಳೆ ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ಸಾರ್ವಜನಿಕರ ಸುಗಮ ಸಂಚಾರ ಹಾಗೂ ಪ್ರಧಾನಿ ಅವರ ಭದ್ರತಾ ದೃಷ್ಟಿಯಿಂದ ಬೆಳ್ಳಿಗೆ 08:00 ಗಂಟೆಯಿಂದ ಮಧ್ಯಾಹ್ನ 02:00 ಗಂಟೆಯವರೆಗೆ ಪ್ರಮುಖ ರಸ್ತೆಗಳಲ್ಲಿ ಸಾರ್ವಜನಿಕರ ವಾಹನಗಳ ಓಡಾಟ ನಿರ್ಬಂಧಿಸಲಾಗಿದೆ. ಸಿಟಿಓ ಜಂಕ್ಷನ್, ಪೊಲೀಸ್ ತಿಮ್ಮಯ್ಯ ಜಂಕ್ಷನ್, ಬಸವೇಶ್ವರ ಸರ್ಕಲ್, ರಾಜಭವನ ರಸ್ತೆ, ಪ್ಯಾಲೇಸ್ ರಸ್ತೆ, ಸ್ಯಾಂಕಿ ರಸ್ತೆ, ಕ್ವೀನ್ಸ್ ರಸ್ತೆ, ಏರ್‌ಪೋರ್ಟ್ ಎಲಿವೇಟೆಡ್ ಕಾರಿಡಾರ್ ರಸ್ತೆ, ರೇಸ್ ಕೋರ್ಸ್ ರಸ್ತೆ, ಬಳ್ಳಾರಿ ರಸ್ತೆ, ಶೇಷಾದ್ರಿ ರಸ್ತೆಯಲ್ಲಿ ಮಹಾರಾಣಿ ಬ್ರಿಡ್ಜ್‌ನಿಂದ ರೈಲ್ವೆ ಸ್ಟೇಷನ್ ಪ್ರವೇಶ ದ್ವಾರದವರೆಗೆ, ಕೆ.ಜಿ ರಸ್ತೆಯಲ್ಲಿ ಶಾಂತಲಾ ಜಂಕ್ಷನ್‌ನಿಂದ ಮೈಸೂರು ಬ್ಯಾಂಕ್‌ಸರ್ಕಲ್‌ವರೆಗೆ, ವಾಟಾಳ್ ನಾಗರಾಜ್ ರಸ್ತೆಯಲ್ಲಿ ಖೋಡೆ ಅಂಡರ್‌ಪಾಸ್‌ನಿಂದ ಪಿ.ಎಫ್‌ವರೆಗೆ, ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ನ ಸುತ್ತ ಮತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧಿಸಲಾಗಿದೆ.