ನವೆಂಬರ್ 11ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಓಡಾಡಲಿರುವ ಬೆಂಗಳೂರಿನ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಬಿಬಿಎಂಪಿ ಮುಚ್ಚುವ ಕೆಲಸ ಮಾಡುತ್ತಿದೆ. ಜೊತೆಗೆ ಪಾಲಿಕೆ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ವಿವಿಧ ವಲಯಗಳಿಗೆ ಭೇಟಿ ನೀಡಿ ರಸ್ತೆಗುಂಡಿ ಮುಚ್ಚುತ್ತಿರುವ ಕಾರ್ಯ ಹಾಗೂ ಪಾದಚಾರಿ ಒತ್ತುವರಿ ತೆರವು ತಪಾಸಣೆ ನಡೆಸಿದ್ದಾರೆ.