ರಾಜ್ಯದ ಹಲವೆಡೆ ಸತತವಾಗಿ ಧಾರಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾಗಿರುವ ಹಾನಿಯನ್ನು ಸರಿಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತುರ್ತಾಗಿ 600 ಕೋಟಿ ರು. ಘೋಷಿಸಿದ್ದಾರೆ. ಬೆಂಗಳೂರಿಗೆ ಮಾತ್ರ 300 ಕೋಟಿ ರು. ಪ್ರವಾಹ ಪೀಡಿತ ಜಿಲ್ಲೆಗಳಿಗೆ 300 ಕೋಟಿ ರು. ಒದಗಿಸಲಾಗಿದೆ. ತಕ್ಷಣ ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಗೃಹ ಕಚೇರಿ ಕೃಷ್ಣಾ ದಲ್ಲಿ ಎಲ್ಲ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ, ಅಲ್ಲಿನ ಪರಿಸ್ಥಿತಿ ಮಾಹಿತಿ ಪಡೆದುಕೊಂಡರು. ಪ್ರವಾಹ ಪೀಡಿತ ಪ್ರದೇಶಗಳ ಜನರ ನೆರವಿಗೆ ತಕ್ಷಣ ಧಾವಿಸಬೇಕು ಎಂದು ಸೂಚಿಸಿದರು.