ಬೆಂಗಳೂರಿನಲ್ಲಿ ಕೇವಲ 1 ಗಂಟೆ ಸುರಿದ ಭಾರೀ ಮಳೆಗೆ ಉಂಟಾದ ಅವಾಂತರಗಳು ಒಂದೆರಡಲ್ಲ. ಒಂದೇ ದಿನ ಇಬ್ಬರು ಸಾವನ್ನಪ್ಪಿದ್ದಾರೆ. ಹಲವು ಮರಗಳು, ಮನೆಗಳು ಹಾಗೂ ವಿದ್ಯುತ್ ಕಂಬಗಳು ಉರುಳಿ ಅಪಾರ ನಷ್ಟಕ್ಕೆ ಮಳೆ ಕಾರಣವಾಗಿದೆ.ಈ ಕುರಿತು ಮಾತನಾಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, “ಭಾನುವಾರ ಮಧ್ಯಾಹ್ನದ ನಂತರ ಸಂಜೆಯೊಳಗೆ 50 ಮಿ.ಮೀ.ಗಿಂತ ಹೆಚ್ಚಿನ ಮಳೆ ಸುರಿದಿದೆ. ಈ ವೇಳೆ ಕೆ.ಆರ್. ಸರ್ಕಲ್‌ನ ಅಂಡರ್‌ಪಾಸ್‌ನಲ್ಲಿ ಕಾರು ಸಿಲುಕಿ ಯುವತಿ ಸಾವನ್ನಪ್ಪಿದ್ದಾಳೆ ಮಳೆಗೆ ದೊಡ್ಡ ಅವಘಡ ಸಂಭವಿಸಿದೆ. ಆದ್ದರಿಂದ ಬೆಂಗಳೂರಿನ ಎಲ್ಲಾ ಅಂಡರ್‌ಪಾಸ್‌ಗಳ ಆಡಿಟ್ ನಡೆಸುತ್ತಿದ್ದೇವೆ. ವರದಿ ಬಂದ ಬಳಿಕ ಸಂಚಾರ ಮಾಡಲು ಸೂಕ್ತವಿಲ್ಲದಿರುವ ಅಂಡರ್‌ಪಾಸ್‌ಗಳನ್ನು ಮುಚ್ಚುತ್ತೇವೆ,”.ಆದರೆ, ಬೆಂಗಳೂರಿನಲ್ಲಿ ಇನ್ನೂ 25 ಸೂಕ್ಷ್ಮ ಪ್ರದೇಶಗಳಿದ್ದು, ಆ ಪ್ರದೇಶಗಳಲ್ಲಿ ಹೆಚ್ಚಿನ ಮಳೆ ಬಂದರೆ, ಪ್ರವಾಹ ಪರಿಸ್ಥಿತಿ ಉಂಟಾಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದರು.ರೈಲ್ವೆ ಅಂಡರ್‌ಪಾಸ್‌ಗಳೂ ಸೇರಿದಂತೆ 18 ಕಡೆ ತಕ್ಷಣ ಕ್ರಮ ತೆಗೆದುಕೊಳ್ಳುತ್ತೇವೆ,” “ಇನ್ನು ಮಹಾಲಕ್ಷ್ಮಿ ಲೇಔಟ್‌ನಲ್ಲಿ ರಾಜಕಾಲುವೆ ಕೆಲಸ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಅಲ್ಲಿ 20 ಮನೆಗಳಿಗೆ ಮಳೆ ನೀರು ನುಗ್ಗಿದೆ. ಕೆ.ಆರ್. ಸರ್ಕಲ್‌ನಲ್ಲಿ ಮತ್ತು ಇತರ ಅಂಡರ್‌ಪಾಸ್‌ಗಳಲ್ಲಿ ನೀರು ನಿಂತುಕೊಳ್ಳಲು ಕಾರಣವಿದೆ. ಬಿರುಗಾಳಿ ಹಾಗೂ ಆಲಿಕಲ್ಲು ಮಿಶ್ರಿತ ಮಳೆಯಾದ ಕಾರಣ ಎಲೆಗಳು, ಕಸ-ಕಡ್ಡಿ ನೀರಿನೊಂದಿಗೆ ಹರಿದುಬಂದು ಅಂಡರ್‌ಪಾಸ್‌ನಲ್ಲಿ ಸಿಲುಕಿಕೊಂಡಿವೆ”.ಎಲೆಗಳು ಬ್ಲಾಕ್ ಮಾಡಿದ್ದರಿಂದ ನೀರು ನಿಂತು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅದೇ ರೀತಿ ಕೆ.ಆರ್. ಸರ್ಕಲ್ ಅಂಡರ್‌ಪಾಸ್‌ನಲ್ಲಿ ದುರಂತ ಸಂಭವಿಸಿದೆ,” ಎಂದು ಮಾಹಿತಿ ನೀಡಿದರು.