ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮಳೆ ಹಾನಿ ನಿಯಂತ್ರಣಕ್ಕೆ ಬಿಬಿಎಂಪಿಯ ಮುಖ್ಯ ಆಯುಕ್ತರು, ಎಲ್ಲ ಎಂಜಿನಿಯರ್, ಸಿಬ್ಬಂದಿ 24/7 ಕೆಲಸ ಮಾಡುತ್ತಿದ್ದಾರೆ. 106 ಪ್ರವಾಹ ಪೀಡಿತ ಪ್ರದೇಶಗಳಿಗೆ ಶಾಸಕ ಅರವಿಂದ ಲಿಂಬಾವಳಿ ಹೋಗಿ ಪರಿಸ್ಥಿತಿ ನಿರ್ವಹಣೆ ಮಾಡಿದ್ದಾರೆ. ನಿರಂತರವಾಗಿ ಜೆಸಿಬಿ, ಹಿಟಾಚಿ ಬಳಕೆ ಮಾಡಿಕೊಂಡು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್‌ಮತ್ತು ಬಿಬಿಎಂಪಿ ಅಧಿಕಾರಿ, ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಬೆಂಗಳೂರಿನ ಮಳೆ ಪರಿಸ್ಥಿತಿ ಹಾಗೂ ಮೂಲ ಸೌಲಭ್ಯ ನಿರ್ವಹಣೆಗೆ ಈಗಾಗಲೇ .300 ಕೋಟಿ ಬಿಡುಗಡೆ ಮಾಡಿದ್ದು, ಅವಶ್ಯಕತೆ ಇದ್ದರೆ ಇನ್ನೂ ಹೆಚ್ಚು ಅನುದಾನ ಬಿಡುಗಡೆ ಮಾಡುತ್ತೇವೆ. ನಿರಂತರವಾಗಿ ಮಳೆ ಸುರಿಯುತ್ತಿದೆ. ಇದರಿಂದಾಗಿ ಬಿಬಿಎಂಪಿ ವ್ಯಾಪ್ತಿಯ ಎಲ್ಲ 164 ಕೆರೆಗಳು ತುಂಬಿ ಹರಿಯುತ್ತಿದ್ದು. ಈ ತರಹದ ಪರಿಸ್ಥಿತಿ ಇತಿಹಾಸದಲ್ಲಿ ಎಂದಿಗೂ ಆಗಿಲ್ಲ. ಯಾವುದೇ ಕೆರೆಗಳಿಗೆ ನೀರಿನ ಮಟ್ಟವನ್ನು ನಿಯಂತ್ರಿಸುವ ಬಾಗಿಲುಗಳು ಇಲ್ಲ. ಇಲ್ಲಿನ ಚರಂಡಿಗಳನ್ನು ಈ ಹಿಂದೆ ದೊಡ್ಡ ಪ್ರಮಾಣದ ನೀರು ಹರಿಯುವಷ್ಟುಸಾಮರ್ಥ್ಯದಲ್ಲಿ ವಿನ್ಯಾಸಗೊಳಿಸಿಲ್ಲ. ಹೀಗಾಗಿ ಇಂತಹ ಸಮಸ್ಯೆ ಉಂಟಾಗಿದೆ.ಮಹದೇವಪುರದ ಡಿಎನ್‌ಎ ಅಪಾರ್ಚ್‌ಮೆಂಟ್‌ಸಮೀಪ 30 ಮೀಟರ್‌ಇದ್ದ ರಾಜಕಾಲುವೆ ಮುಂದೆ 3 ಮೀಟರ್‌ಆಗಿದೆ. ಪರಿಸ್ಥಿತಿ ಹೀಗಿರುವಾಗ ನೀರು ಸಮರ್ಪಕವಾಗಿ ಹರಿಯದೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಮಳೆ ನಿಂತ ಕೂಡಲೇ ಇದೆಲ್ಲಕ್ಕೂ ಶಾಶ್ವತ ಪರಿಹಾರ ಒದಗಿಸುವ ಕಾರ್ಯ ಕೈಗೆತ್ತಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.