ರಾಜಧಾನಿಯಲ್ಲಿ ಬಿಜೆಪಿ ಪರ ಮತಯಾಚನೆಗಾಗಿ ಶನಿವಾರದಂದು ಪ್ರಧಾನಿ ನರೇಂದ್ರ ಮೋದಿಯವರ ರೋಡ್‌ಶೋ ನಡೆಸಿದ್ದರು. ಈ ವೇಳೆ ಜಯನಗರ ಬಸ್ ಟರ್ಮಿನಲ್ ಮುಚ್ಚಿದ್ದರಿಂದ ಅನೇಕ ಪ್ರಯಾಣಿಕರು ತೊಂದರೆಗೀಡಾಗಿದ್ದಾರೆ. ಹಲವು ಮಂದಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಬೆನ್ನಲ್ಲೇ ಬೆಂಗಳೂರು ಬಸ್ ಪ್ರಯಾಣಿಕ ವೇದಿಕೆ ಬೆಂಗಳೂರು ಟ್ರಾಫಿಕ್ ಪೊಲೀಸ್ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ದೂರು ಸಲ್ಲಿಸಿದೆ. ಪ್ರಧಾನಿ ರೋಡ್‌ಶೋ ವೇಳೆ ಬಸ್ ಟರ್ಮಿನಲ್ ಮುಚ್ಚಿರುವುದು ಕಾನೂನುಬಾಹಿರ ಎಂದು ಕಿಡಿಕಾರಿದೆ.