ಬೆಂಗಳೂರಿನ ರೋಡ್ ಶೋ ವೇಳೆ ಪ್ರಧಾನಿ ಅವರು ರಸ್ತೆ ಬದಿಯ ಆಂಜನೇಯ ಮೂರ್ತಿಗೆ ನಮಸ್ಕರಿಸಿದ್ದು ಭಾರೀ ವೈರಲ್ ಆಗಿದೆ

ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ನಗರದಲ್ಲಿ ಅಬ್ಬರದ ರೋಡ್ ಶೋ ನಡೆಸಿದರು. 28 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ರಾಜಧಾನಿಯಲ್ಲಿ 26 ಕಿಮೀ ಬೃಹತ್ ರೋಡ್ ಶೋನಲ್ಲಿ ಬಿಜೆಪಿ ಪರ ಮತಯಾಚನೆ ಮಾಡಿದರು. ಜೆಪಿ ನಗರದಿಂದ ಆರಂಭವಾದ ರೋಡ್ ಶೋ ಮಲ್ಲೇಶ್ವರಂ 18ನೇ ಕ್ರಾಸ್‌ ಬಳಿ ಕೊನೆಗೊಂಡಿತು 11 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್ ಶೋ ನಡೆದಿದ್ದು, ತೆರೆದ ವಾಹನದಲ್ಲಿ ಸಾಗಿದ ಮೋದಿ, ಸಹಸ್ರಾರು ಜನರತ್ತ ಕೈಬೀಸಿದರು. ಅವರಿಗೆ ಸಂಸದರಾದ ಪಿ.ಸಿ. ಮೋಹನ್, ತೇಜಸ್ವಿ ಸೂರ್ಯ ಸಾಥ್ ನೀಡಿದರು. ಬೆಂಗಳೂರಿನ ರೋಡ್ ಶೋ ವೇಳೆ ಪ್ರಧಾನಿ ಅವರು ರಸ್ತೆ ಬದಿಯ ಆಂಜನೇಯ ಮೂರ್ತಿಗೆ ನಮಸ್ಕರಿಸಿದ್ದು ವಿಶೇಷವಾಗಿತ್ತು. ಈ ಫೋಟೋ ಇದೀಗ ಭಾರೀ ವೈರಲ್ ಆಗಿದೆ.ಇತ್ತೀಚೆಗೆ ಕಾಂಗ್ರೆಸ್ ಬಿಡುಗಡೆ ಮಾಡಿದ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳವನ್ನು ನಿಷೇಧಿಸುತ್ತೇವೆ ಎಂದು ತಿಳಿಸಿದ್ದರು. ಇದಿರಿಂದ ಕಾಂಗ್ರೆಸ್ ವಿರುದ್ಧ ಬಿಜೆಪಿ ಸೇರಿದಂತೆ ಹಿಂದೂಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ.ಈ ಹಿನ್ನೆಲೆಯಲ್ಲಿ ನರೇಂದ್ರ ಮೋದಿ ಅವರು ಇತ್ತೀಚಿಗಿನ ಚುನಾವಣಾ ಪ್ರಚಾರದ ಸಮಾವೇಶಗಳಲ್ಲಿ ಜೈ ಬಜರಂಗಬಲಿ ಎಂದು ಎಂದು ಭಾಷಣ ಆರಂಭಿಸುತ್ತಿದ್ದಾರೆ.

Leave a Reply

Your email address will not be published. Required fields are marked *