ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳೆಯುತ್ತಿರುವ ರಾಜ್ಯದ ರಾಜಧಾನಿ ಬೆಂಗಳೂರಿನ ಸುತ್ತಲಿನ ಪ್ರದೇಶ ಹಾಗೂ ಹೊರವಲಯದಲ್ಲಿ ಭೂಮಿಯ ಬೆಲೆ ಬಹಳಷ್ಟು ಏರಿಕೆಯಾಗಿದ್ದು, ವಾಣಿಜ್ಯ ಉದ್ದೇಶಗಳಿಗಾಗಿ ಹಾಗೂ ವೈಯಕ್ತಿಕ ಲಾಭಕ್ಕಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಮಾರಾಟ ಮಾಡಲಾಗಿದೆ. ನಗರದ ಸುತ್ತಮುತ್ತ 100 ಕಿ.ಮೀ ವ್ಯಾಪ್ತಿಯಲ್ಲಿ ನಿರ್ಮಿತವಾಗಿರುವ ರೆಸಾರ್ಟ್ ಮತ್ತು ಅತಿಥಿ ತಂಗುದಾಣಗಳು ಸಹ ಸರ್ಕಾರಿ ಭೂಮಿಯನ್ನು ಒತ್ತುವರಿ ಮಾಡಿರುವ ಬಗ್ಗೆ, ದೂರುಗಳು ದಾಖಲಾಗಿರುತ್ತವೆ. ಬೆಂಗಳೂರು ನಗರದ ಸುತ್ತಮುತ್ತ ಸುಮಾರು 75,000 ಎಕರೆ ಭೂಮಿ ಒತ್ತುವರಿಯಾಗಿದೆ ಎಂಬ ದೂರು ಬಂದಿದ್ದು, ಕೂಡಲೇ ತನಿಖೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ ಎಂದು ತಿಳಿಸಲಾಗಿದೆ.