ಬೆಳ್ಳಂಬೆಳಗ್ಗೆ ಬಿಎಸ್‍ವೈ ನಿವಾಸಕ್ಕೆ ಸಿಎಂ ಬೊಮ್ಮಾಯಿ

ಇಂದು ಬೆಳ್ಳಂಬೆಳಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನಿವಾಸಕ್ಕೆ ದೌಡಾಯಿಸಿದ್ದು, ಕುತೂಹಲಕ್ಕೀಡು ಮಾಡಿತ್ತು. ಆದರೆ ಬಿಎಸ್‍ವೈ ಹಾಗೂ ಸಿಎಂ ಭೇಟಿ ಹಿಂದೆ ಮೋದಿ ಆಗಮನದ ಚರ್ಚೆ ಇದೆ. ಸೆಪ್ಟೆಂಬರ್ 2 ಕ್ಕೆ ಮಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮೋದಿ ಸಮಾವೇಶದ ಕುರಿತು ಯಡಿಯೂರಪ್ಪರ ಜೊತೆ ಸಿಎಂ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *